ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ, ಚಿತ್ರಮಂದಿರಗಳಲ್ಲಿ ಈ ಹಿಂದೆ ಇದ್ದಂತೆ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶದ ನಿರ್ಬಂಧವನ್ನು ಸರ್ಕಾರ ಮತ್ತೆ ಜಾರಿಗೆ ತರುವುದೇ ಎನ್ನುವ ಆತಂಕ ಚಿತ್ರರಂಗಕ್ಕೆ ಎದುರಾಗಿತ್ತು. ಆದರೆ ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ.
‘ರಾಜ್ಯದ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಚಿತ್ರಮಂದಿರದ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ’ ಎಂದು ಟ್ವೀಟ್ ಮೂಲಕ ಯಡಿಯೂರಪ್ಪ ಹೇಳಿದ್ದಾರೆ.
ಖ್ಯಾತ ನಟರ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವ ಸಂದರ್ಭದಲ್ಲೇ ಮತ್ತೆ ನಿರ್ಬಂಧದ ವದಂತಿ ಹರಡಿತ್ತು. ಇದಕ್ಕೆ ಚಿತ್ರರಂಗದವರೂ ವಿರೋಧ ವ್ಯಕ್ತಪಡಿಸಿದ್ದರು.
ಕೇಂದ್ರ ಸರ್ಕಾರವು ಚಿತ್ರಮಂದಿರಗಳಲ್ಲಿ ಕಳೆದ ಫೆ.1ರಿಂದ ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅವಕಾಶ ಕೊಟ್ಟಿದ್ದರೂ, ರಾಜ್ಯ ಸರ್ಕಾರ ಶೇ 50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿ ನಿರ್ಬಂಧ ಮುಂದುವರಿಸಿತ್ತು. ಇದಕ್ಕೆ ಚಿತ್ರರಂಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಆದೇಶವನ್ನು ಹಿಂಪಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.