ಬೆಂಗಳೂರು: ಟೀಮ್ ಇಂಡಿಯಾ ವಿಶ್ವಕಪ್ ಕ್ರಿಕೆಟ್ ಗೆದ್ದಿರುವ ಕಥೆಯನ್ನು ಹೊಂದಿರುವ ಬಹುನಿರೀಕ್ಷಿತ ಚಿತ್ರ ‘83‘ ನಿರ್ಮಾಪಕರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.
ಚಿತ್ರ ನಿರ್ಮಾಪಕರ ತಂಡದಲ್ಲಿ ನಟ ರಣವೀರ್ ಸಿಂಗ್ ಪತ್ನಿ ದೀಪಿಕಾ ಪಡುಕೋಣೆ ಕೂಡ ಇದ್ದು, ಅವರ ಮೇಲೂ ದೂರು ದಾಖಲಾಗಿದೆ.
ಯುಎಇ ಮೂಲದ ಹೂಡಿಕೆದಾರರೊಬ್ಬರು ಚಿತ್ರದ ನಿರ್ಮಾಪಕರ ವಿರುದ್ಧ ಮುಂಬೈನ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಸಿನಿಮಾದಲ್ಲಿ ₹16 ಕೋಟಿ ಹೂಡಿಕೆ ಮಾಡಿದ್ದಾಗಿ ಅವರು ಆರೋಪಿಸಿದ್ದು, ಅದರಲ್ಲಿ ವಂಚನೆ ಎಸಗಲಾಗಿದೆ ಎಂದು ಪ್ರಕರಣ ದಾಖಲಾಗಿದೆ.
83 ಚಿತ್ರಕ್ಕೆ ಕಬೀರ್ ಖಾನ್, ಸಾಜಿದ್ ನಾಡಿಯವಾಲ ಮತ್ತು ದೀಪಿಕಾ ಪಡುಕೋಣೆ ನಿರ್ಮಾಪಕರಾಗಿದ್ದಾರೆ.
ಈ ಚಿತ್ರದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಮಿಂಚಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.