ಬೆಂಗಳೂರು:ನಿರ್ಮಾಪಕ ರಾಕ್‌ಲೈವ್ ವೆಂಕಟೇಶ್ ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಕ್‌ಲೈನ್ ವೆಂಕಟೇಶ್ ಅವರನ್ನೂ ತಪಾಸಣೆಗೆ ಒಳಪಡಿಸಲಾಗಿದೆ. ಸೋಂಕು ದೃಢಪಟ್ಟಿಲ್ಲ.
ಮಂಡ್ಯ ಸಂಸದೆ ಸುಮಲತಾ ಅವರಲ್ಲಿ ಕೊರೊನಾ ದೃಢಪಟ್ಟ ನಂತರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರಿಗೂ ಕೊರೊನಾ ಸೋಂಕು ಇದೆ ಎಂಬ ಮಾತು ಕೇಳಿಬಂದಿತ್ತು. ಈ ವರದಿಗಳನ್ನು ರಾಕ್‌ಲೈನ್ ವೆಂಕಟೇಶ್ ಪುತ್ರ ಯತೀಶ್ ಅಲ್ಲಗಳೆದಿದ್ದರು.
ರಾಕ್‌ಲೈನ್ ವೆಂಕಟೇಶ್ ಕಳೆದ ಕೆಲ ದಿನಗಳಿಂದ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.