ADVERTISEMENT

‘ಬಾಹುಬಲಿ ಕಟ್ಟಪ್ಪ’ ಖ್ಯಾತಿಯ ನಟ ಸತ್ಯರಾಜ್‌ಗೆ ಕೋವಿಡ್‌ ದೃಢ: ಆಸ್ಪತ್ರೆಗೆ ದಾಖಲು

ಐಎಎನ್ಎಸ್
Published 9 ಜನವರಿ 2022, 5:10 IST
Last Updated 9 ಜನವರಿ 2022, 5:10 IST
ನಟ ಸತ್ಯರಾಜ್
ನಟ ಸತ್ಯರಾಜ್   

ಚೆನ್ನೈ: ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ‘ಬಾಹುಬಲಿ ಕಟ್ಟಪ್ಪ’ ಖ್ಯಾತಿಯ ತಮಿಳು ನಟ ಸತ್ಯರಾಜ್ ಅವರು ಮುಂದಿನ ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸತ್ಯರಾಜ್ ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದು, ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿರುವುದಾಗಿ ಸತ್ಯರಾಜ್ ಆಪ್ತ ಮೂಲಗಳು ಖಚಿತಪಡಿಸಿವೆ.

ಶನಿವಾರ ತೆಲುಗು ನಟ ಮಹೇಶ್‌ ಬಾಬು (46) ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು. ಸದ್ಯ ಅವರು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದು, ಸೂಕ್ತ ವೈದ್ಯಕೀಯ ಸಲಹೆಗಳನ್ನು ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ADVERTISEMENT

ಬಹುಭಾಷಾ ನಟಿ ತ್ರಿಷಾ ಕೃಷ್ಣನ್‌ ಅವರಿಗೂ ಕೋವಿಡ್‌ ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತ ಬಾಲಿವುಡ್‌ ನಿರ್ದೇಶಕ ಮಧುರ್ ಭಂಡಾರ್ಕರ್‌ ಅವರಿಗೂ ಕೋವಿಡ್‌ ಇರುವುದು ದೃಢಪಟ್ಟಿದ್ದು, ಅವರು ಮನೆಯಲ್ಲಿ ಪ್ರತ್ಯೇಕ ವಾಸದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.