ADVERTISEMENT

ಹಸೆಮಣೆ ಏರಲು ಸಜ್ಜಾದ ನಟ ಡಾಲಿ ಧನಂಜಯ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2024, 4:13 IST
Last Updated 1 ನವೆಂಬರ್ 2024, 4:13 IST
   

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡಿಯೊ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.

' ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ. ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗಬೇಕು. ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೊಗೆ ಅಭಿಮಾನಿಗಳು ಪ್ರೀತಿಯ ಶುಭಾಶಯ ಕೋರುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.