ADVERTISEMENT

ಶೀಘ್ರದಲ್ಲಿ ‘‌...ಭಾಗ್ಯಲಕ್ಷ್ಮಿ’ ತೆರೆಗೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2024, 0:30 IST
Last Updated 1 ನವೆಂಬರ್ 2024, 0:30 IST
<div class="paragraphs"><p>ಬೃಂದಾ ಆಚಾರ್ಯ</p></div>

ಬೃಂದಾ ಆಚಾರ್ಯ

   

ದೀಕ್ಷಿತ್‌ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಜೋಡಿಯಾಗಿ ನಟಿಸಿರುವ ‘‌ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ‘ಚಾರ್ಲಿ’ ಸೇರಿದಂತೆ ಕನ್ನಡದ ಪ್ರಮುಖ ಚಿತ್ರಗಳಿಗೆ ವಿಎಫ್‌ಎಕ್ಸ್‌ ಮಾಡಿರುವ ಅಭಿಷೇಕ್‌ ಎಂ. ಚೊಚ್ಚಲ ನಿರ್ದೇಶನದ ಈ ಚಿತ್ರ ಡಿಸೆಂಬರ್‌ನಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ. 

‘ಬ್ಯಾಂಕ್‌ ದರೋಡೆಗೆ ಸಂಬಂಧಿಸಿದ ಹಾಸ್ಯಮಯ ಕಥೆ ಇದೆ. ಇದೊಂದು ಥ್ರಿಲ್ಲರ್‌ ಜಾನರ್‌ನ ಸಿನಿಮಾ. ಚಿತ್ರೀಕರಣ ಮುಕ್ತಾಯಗೊಂಡಿದ್ದು ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಪ್ರಗತಿಯಲ್ಲಿದೆ. ಬೆಂಗಳೂರು, ತುಮಕೂರು ಸುತ್ತಮುತ್ತ 60 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದೇವೆ. ಶೀಘ್ರದಲ್ಲಿ ಚಿತ್ರದ ಟೀಸರ್‌ ಬಿಡುಗಡೆ ಮಾಡುವ ಆಲೋಚನೆಯಿದೆ’ ಎನ್ನುತ್ತಾರೆ ನಿರ್ದೇಶಕ ಅಭಿಷೇಕ್‌.

ADVERTISEMENT

ಯುವಕರ ತಂಡವೊಂದು ವಿವಿಧ ಬ್ಯಾಂಕ್‌ಗಳನ್ನು ಲೂಟಿ ಮಾಡುವ ಹಾಸ್ಯಮಯ ಕಥೆ ಹೊಂದಿರುವ ಚಿತ್ರ ಪೋಸ್ಟರ್‌ನಿಂದಲೇ ಗಮನ ಸೆಳೆದಿತ್ತು. ‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ದಂತಹ ಚಿತ್ರಗಳನ್ನು ನೀಡಿದ್ದ ನಿರ್ಮಾಪಕ ಎಚ್.ಕೆ ಪ್ರಕಾಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. 

ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ ಚಿತ್ರಕ್ಕಿದೆ. ಅಚ್ಯುತ್ ಕುಮಾರ್, ಸಾಧು ಕೋಕಿಲ, ಅಶ್ವಿನ್ ರಾವ್ ಪಲ್ಲಕ್ಕಿ ಮೊದಲಾದವರು ಚಿತ್ರದಲ್ಲಿದ್ದಾರೆ.‌

ದೀಕ್ಷಿತ್‌ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.