ಮುಂಬೈ: ‘ಆರ್‌ಆರ್‌ಆರ್’ನ ಭರ್ಜರಿ ಯಶಸ್ಸಿನ ನಂತರ ನಿರ್ದೇಶಕ ರಾಜಮೌಳಿ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಜೊತೆಗೆ ಸಿನಿಮಾ ಘೋಷಿಸಿದ್ದರು. ಅದಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಹೆಸರು ದಟ್ಟವಾಗಿ ಕೇಳಿಬಂದಿದೆ.
ರಾಜಮೌಳಿ ತಂದೆ ಕೆ.ವಿ.ವಿಜಯೇಂದ್ರ ಪ್ರಸಾದ್ ಚಿತ್ರಕ್ಕೆ ಕಥೆ ರಚಿಸಿದ್ದು, ನೈಜ ಘಟನೆಗಳಿಂದ ಕೂಡಿದೆ ಎಂದು ವರದಿಯಾಗಿತ್ತು. ಇದೀಗ ಆ ಚಿತ್ರಕ್ಕೆ ದೀಪಿಕಾ ನಾಯಕಿಯಾಗಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
‘ಎಸ್‌ಎಸ್‌ಎಂಬಿ29’ ಎಂದು ಚಿತ್ರಕ್ಕೆ ತಾತ್ಕಾಲಿಕವಾಗಿ ಹೆಸರಿಡಲಾಗಿದ್ದು, ಮುಂದಿನ ವರ್ಷ ಸಿನಿಮಾ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ಮೊದಲ ಸಲ ದೀಪಿಕಾ–ಮಹೇಶ್ ಬಾಬು ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.
ದೀಪಿಕಾ ಪ್ರಸ್ತುತ ಪ್ರಭಾಸ್, ಅಮಿತಾಭ್ ಬಚ್ಚನ್ ಮತ್ತು ಸುನೀಲ್ ಶೆಟ್ಟಿ ಜೊತೆಗಿನ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಚಿತ್ರ ಕೋವಿಡ್‌ನಿಂದಾಗಿ ವಿಳಂಬವಾಗಿತ್ತು. ಈ ಹಿಂದೆ ಇದೇ ಚಿತ್ರದ ಸೆಟ್‌ನಲ್ಲಿ ದೀಪಿಕಾ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಭಾಸ್, ಆದಿಪುರುಷ್‌ನಲ್ಲಿ ಮಗ್ನರಾಗಿದ್ದು ಈ ಚಿತ್ರದ ಟ್ರೇಲರ್ ಈಗಾಗಲೇ ಬಿಡುಗಡೆಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.