ಹೈದರಾಬಾದ್: ತೆಲುಗು ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಕಿಸ್ ಕೊಡುವುದಕ್ಕೆ ನಟಿ ಅಮಲಾ ಪೌಲ್ ಹೆಚ್ಚು ಮೊತ್ತಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತುಗಳು ಟಾಲಿವುಡ್ ಅಂಗಳದಲ್ಲಿ ಕೇಳಿಬಂದಿವೆ.
ನಾರ್ಗಾಜುನ ಅಭಿನಯದ ‘ಗೋಸ್ಟ್’ ಸಿನಿಮಾದಿಂದ ನಟಿ ಕಾಜಲ್ ಅಗರ್ವಾಲ್ ಹಿಂದೆ ಸರಿದಿದ್ದಾರೆ. ಆದ್ದರಿಂದ ಅಮಲಾ ಪೌಲ್ ಅವರಿಗೆ ಚಿತ್ರದಲ್ಲಿ ನಟಿಸಲು ಅವಕಾಶ ಸಿಕ್ಕಿದ್ದು, ಚಿತ್ರದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳಲು ಅವರು ಹೆಚ್ಚು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ನಟಿ ಕಾಜಲ್ ಅಗರ್ವಾಲ್ ಗರ್ಭಿಣಿ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಹಲವು ಸಿನಿಮಾಗಳಿಂದ ಹೊರಗುಳಿದ್ದಾರೆ. ಆ ಹಿನ್ನೆಲೆಯಲ್ಲಿ ‘ಗೋಸ್ಟ್’ ಸಿನಿಮಾಗೆ ಹೊಸ ನಟಿಯ ಆಯ್ಕೆ ಅನಿವಾರ್ಯವಾಗಿತ್ತು. ಹಾಗಾಗಿ ನಿರ್ದೇಶಕ ಪ್ರವೀಣ್ ಅವರು ಅಮಲಾಗೆ ಆಫರ್ ನೀಡಿದ್ದಾರೆ ಎಂದು ಹೇಳಲಾಗಿದೆ.
ಮುಂದಿನ ಎರಡು ತಿಂಗಳಲ್ಲಿ ಸಿನಿಮಾ ಚಿತ್ರೀಕರಣ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.