ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಿರ್ದೇಶಕ ಹಾಗೂ ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ನಿಧನರಾಗಿದ್ದಾರೆ.
ಅವರಿಗೆ 46 ವರ್ಷ ವಯಸ್ಸಾಗಿತ್ತು.
ದೀಪಕ್ ಅರಸ್ ಅವರು ಕೆಲದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ನನ್ನ ಪ್ರೀತಿಯ ಸಹೋದರ ದೀಪಣ್ಣ ಅವರು ನಮ್ಮನ್ನು ಅಗಲಿದರು’ ಎಂದು ನಟಿ ಅಮೂಲ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಹಂಚಿಕೊಂಡಿದ್ದಾರೆ.
ದೀಪಕ್ ಅರಸ್ ಅವರು ರಾಕೇಶ್ ನಟನೆಯ 'ಮನಸಾಲಜಿ' (2011) ಹಾಗೂ ಡಾರ್ಲಿಂಗ್ ಕೃಷ್ಣ ನಟನೆಯ 'ಶುಗರ್ ಫ್ಯಾಕ್ಟರಿ' (2023) ಎಂಬ ಸಿನಿಮಾಗಳನ್ನು ನಿರ್ದೇಶಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.