ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಅವರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ.
ಮೇಘನಾ ಅವರು ಮಗ ರಾಯನ್ ರಾಜ್ ಸರ್ಜಾ ಫೋಟೊವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
‘ಇದು ರಾಯನ್‌ನ ಹಲವು ಭಾವ ಭಂಗಿ. ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ಮಗು ನನ್ನ ವಿಸ್ಮಯ. ಈ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಹೊಳಪು –ಬೆಳಕು ತರಲಿ. ರಾಯನ್ ಈ ದೀಪಾವಳಿಯಲ್ಲಿ ಸಖತ್ ಬ್ರೈಟ್ ಆಗಿ ಮಿಂಚುತ್ತಿದ್ದಾನೆ’ ಎಂದು ಬರೆದುಕೊಂಡಿದ್ದಾರೆ.
ಮೇಘನಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದು, ರಾಯನ್ ಜೊತೆಗಿನ ಫೋಟೊ ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ರಾಯನ್‌ಗೆ ಮೊದಲ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.