ಬೆಂಗಳೂರು:ಹೈದರಾಬಾದ್ ನಲ್ಲಿ ನಡೆಯುತ್ತಿರುವ 'ಪೊಗರು' ಚಿತ್ರದ ಶೂಟಿಂಗ್ ಸೆಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನಟ ಧ್ರುವ ಸರ್ಜಾ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ.
ನಂದಕಿಶೋರ್ ನಿರ್ದೇಶನದ ಈ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿದೆ. ಇದಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಫೈಟಿಂಗ್ ಶೂಟ್ ನಡೆಯುತ್ತಿದ್ದ ವೇಳೆ ಈ ಸೆಟ್ಗೆ ಬೆಂಕಿ ತಗುಲಿದೆ. ಸೆಟ್ ಬಹುತೇಕ ಸುಟ್ಟು ಕರಕಲಾಗಿದೆ.
ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ನಟಿ ರಶ್ಮಿಕಾ ಮಂದಣ್ಣ ಅವರು ಧ್ರುವ ಸರ್ಜಾಗೆ ಜೋಡಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.