ಬೆಂಗಳೂರು: ನಗರದ ಆರ್.ವಿ. ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ‘ಸ್ಕೂಲ್ ಆಫ್ ಫಿಲ್ಮ್, ಮೀಡಿಯಾ ಆ್ಯಂಡ್ ಕ್ರಿಯೇಟಿವ್ ಆರ್ಟ್ಸ್ (ಸಿನಿಮಾ, ಮಾಧ್ಯಮ ಮತ್ತು ಸೃಜನಶೀಲ ಕಲೆಗಳ ಕಾಲೇಜು–ಎಸ್ಓಎಫ್ಎಂಸಿಎ) ಸ್ಥಾಪಿಸುವ ಕುರಿತು ಆರ್.ವಿ. ವಿಶ್ವವಿದ್ಯಾಲಯ ಹಾಗೂ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಗಳು ಒಡಂಬಡಿಕೆಗೆ ಸಹಿ ಹಾಕಿವೆ.
ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ನ ಅಧ್ಯಕ್ಷ ಎಂ.ಪಿ. ಶ್ಯಾಮ್, ‘ದೃಶ್ಯ ಮಾಧ್ಯಮಕ್ಕೆ ಸಂಬಂಧಿಸಿದಂತೆ ನಮ್ಮ ವಿದ್ಯಾರ್ಥಿಗಳಿಗೆ ಜಾಗತಿಕ ಗುಣಮಟ್ಟದ ತರಬೇತಿ ಲಭ್ಯವಾಗಲಿದೆ. ದೇಶದ ಅತಿದೊಡ್ಡ ಸ್ಟುಡಿಯೊದಲ್ಲಿ ಪ್ರಾಯೋಗಿಕ ಅನುಭವವೂ ಸಿಲಿಗದೆ ಎಂದು ತಿಳಿಸಿದರು.
‘ಈ ಕಾಲೇಜಿನಲ್ಲಿ ಸಿನಿಮಾ, ಮಾಧ್ಯಮ, ಒಟಿಟಿ, ಸೃಜನಶೀಲ ಕಲೆಗಳಿಗೆ ಸಂಬಂಧಿಸಿದ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಇರಲಿವೆ. ಚಿತ್ರ ನಿರ್ಮಾಣ, ಆನಿಮೇಶನ್ ಮತ್ತು ದೃಶ್ಯಕಲೆ, ಚಿತ್ರ ನಿರ್ದೇಶನ, ಚಿತ್ರಕಥೆ ರಚನೆ, ಸಂಕಲನ, ಸಿನಿ ಛಾಯಾಗ್ರಹಣ, ಧ್ವನಿ ಸಂರಚನೆ ಕೋರ್ಸ್‌ಗಳಿ ನಡೆಯಲಿವೆ’ ಎಂದರು.
ಹೊಂಬಾಳೆ ಫಿಲ್ಮ್ಸ್ ಸಂಸ್ಥಾಪಕ ವಿಜಯ್ ಕಿರಗಂದೂರು, ‘ಮುಂಬರುವ ವರ್ಷಗಳಲ್ಲಿ ದೃಶ್ಯ ಮಾಧ್ಯಮ ಹಾಗೂ ದೃಶ್ಯ ಮನೋರಂಜನೆಯ ಕ್ಷೇತ್ರಕ್ಕೆ ಅಗತ್ಯವಿರುವ ವೃತ್ತಿಪರ ಪ್ರತಿಭಾವಂತರನ್ನು ರೂಪಿಸಲು ಈ ಕಾಲೇಜು ಸಹಾಯಕವಾಗಲಿದೆ. ಎರಡು ಸಂಸ್ಥೆಗಳು ಒಗ್ಗೂಡಿ ಗುಣಮಟ್ಟದ ಶಿಕ್ಷಣದ ಮೂಲಕ ಪ್ರತಿಭಾವಂತರಿಗೆ ವೇದಿಕೆ ಕಲ್ಪಿಸಲು ಮುಂದಾಗುತಿದ್ದೇವೆ‘ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.