ಕೊಚ್ಚಿ(ಕೇರಳ): ಖ್ಯಾತ ಸಿನಿಮಾ ಸಂಕಲನಕಾರ(Editor) ನಿಶಾದ್ ಯೂಸುಫ್ ಇಂದು ಮುಂಜಾನೆ ಕೊಚ್ಚಿಯ ಅಪಾರ್ಟ್ಮೆಂಟ್ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಡರಾತ್ರಿ 2 ಗಂಟೆ ಸುಮಾರಿಗೆ ಪಣಂಪಳ್ಳಿ ನಗರದ ಅಪಾರ್ಟ್ಮೆಂಟ್ನಲ್ಲಿ ಅವರ ಶವ ಪತ್ತೆಯಾಗಿದೆ.
ನಿಶಾದ್ ಅವರ ಸಾವನ್ನು ಆತ್ಮಹತ್ಯೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
‘ತಲ್ಲುಮಾಲ’ ಸಿನಿಮಾದ ಅತ್ಯುತ್ತಮ ಸಂಕಲನಕ್ಕಾಗಿ 2022ರಲ್ಲಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದ ನಿಶಾದ್ ಅವರು, ಚಾವೆರ್, ಉಂಡಾ, ಸೌದಿ ವೆಲ್ಲಕ್ಕ, ಒನ್, ಆಪರೇಷನ್ ಜಾವಾ, ಬಾಜೂಕಾ, ಮತ್ತು ಕಂಗುವ ಮುಂತಾದ ಚಿತ್ರಗಳಿಗೆ ಸಂಕಲನ ಮಾಡಿದ್ದಾರೆ.
ನಟ ಮಮ್ಮುಟಿ ಅಭಿನಯದ ‘ಬಾಜೂಕಾ’ ಮತ್ತು ತಮಿಳು ನಟ ಸೂರ್ಯ ನಟನೆಯ ‘ಕಂಗುವ’ ಚಿತ್ರಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.