ಬಹುತೇಕ ಹೊಸಬರಿಂದಲೇ ಕೂಡಿರುವ ‘ಆರ್‌ಪಿ’ ಚಿತ್ರದ ಟೈಟಲ್ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ಬ್ಲಾಕ್ ಅಂಡ್ ವೈಟ್’ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಕಬ್ಬಾಳಮ್ಮ ಕ್ರಿಯೇಶನ್ ಅಡಿಯಲ್ಲಿ ಯುವರಾಜ್.ಎಸ್ ಸಿನಿಮಾವನ್ನು ನಿರ್ಮಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
‘ಗೆಳೆಯ ರಾಘವೇಂದ್ರ ಪ್ರಸಾದ್ ಅವರ ಜೀವನದಲ್ಲಿ ನಡೆದ, ನಡೆಯುತ್ತಿರುವ ಒಂದಷ್ಟು ಘಟನೆಗಳಿಂದ ಚಿತ್ರಕಥೆ ಸಿದ್ದಪಡಿಸಲಾಗಿದೆ. ಅದಕ್ಕಾಗಿ ಆರ್‌ಪಿ ಎಂಬುದಾಗಿ ಶೀರ್ಷಿಕೆ ಇಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರಕೃತಿ ನಾಶವಾಗುತ್ತಿದ್ದರೂ ಅದನ್ನು ನಾವು ಮರೆಯುತ್ತಿದ್ದೇವೆ. ಆ ಬಗ್ಗೆ ಅರಿವು ಮೂಡಿಸುವ ಚಿತ್ರವಿದು’ ಎಂದರು ನಿರ್ದೇಶಕರು.
ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರ ಸಿದ್ದಗೊಳ್ಳುತ್ತಿದೆ. ತಾರಾಗಣ, ತಂತ್ರಜ್ಞರ ಆಯ್ಕೆ ಪ್ರಕ್ರಿಯೆ ಶುರುವಾಗಿದ್ದು ಮುಂದಿನ ದಿನಗಳಲ್ಲಿ ಮಾಹಿತಿ ನೀಡುವುದಾಗಿ ಚಿತ್ರತಂಡ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.