ADVERTISEMENT

‘s/o ಮುತ್ತಣ್ಣ' ಶೀಘ್ರದಲ್ಲಿ ತೆರೆಗೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2024, 22:36 IST
Last Updated 15 ಅಕ್ಟೋಬರ್ 2024, 22:36 IST
   

ನಟ ದೇವರಾಜ್ ಅವರ ಎರಡನೇ ಪುತ್ರ ಪ್ರಣಮ್ ದೇವರಾಜ್ ನಾಯಕನಾಗಿ ನಟಿಸಿರುವ ‘s/o ಮುತ್ತಣ್ಣ’ ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ.‌ ನಿರ್ದೇಶಕ ಪ್ರೇಮ್‌ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಶ್ರೀಕಾಂತ್ ಹುಣಸೂರು ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

‘ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಅಂತಿಮ ಹಂತದಲ್ಲಿದೆ. ಇತ್ತೀಚೆಗಷ್ಟೆ ಚಿತ್ರದ ಆಡಿಯೊ ಹಕ್ಕುಗಳನ್ನು A2 ಮ್ಯೂಸಿಕ್‌ ಸಂಸ್ಥೆ ಉತ್ತಮ ಮೊತ್ತಕ್ಕೆ ಖರೀದಿಸಿದೆ. ಇದರಿಂದ ಸಿನಿಮಾದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ’ ಎಂದಿದ್ದಾರೆ ನಿರ್ದೇಶಕರು. 

ಪ್ರಣಮ್‌ಗೆ ನಾಯಕಿಯಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ಜೊತೆಯಾಗಿದ್ದಾರೆ. ಶೀರ್ಷಿಕೆಯೇ ಹೇಳುತ್ತಿರುವಂತೆ ಅಪ್ಪ-ಮಗನ ಭಾಂದವ್ಯದ ಕಥೆ ಸಿನಿಮಾದಲ್ಲಿ‌ದೆ. ಪುರಾತನ‌ ಫಿಲ್ಮ್ಸ್ ಹಾಗೂ ಎಸ್‌ಆರ್‌ಕೆ ಫಿಲ್ಮ್ಸ್ ಜೊತೆಗೂಡಿ ನಿರ್ಮಿಸಿರುವ ಚಿತ್ರಕ್ಕೆ ಸ್ಕೇಟಿಂಗ್ ಕೃಷ್ಣ ಛಾಯಾಚಿತ್ರಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್‌ ಸಂಗೀತವಿದೆ. 

ADVERTISEMENT

ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ ಮುಂತಾದವರು ತಾರಾಗಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.