ADVERTISEMENT

ಸಲ್ಮಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಪಿಟಿಐ
Published 8 ಜುಲೈ 2024, 16:05 IST
Last Updated 8 ಜುಲೈ 2024, 16:05 IST
ಸಲ್ಮಾನ್‌ ಖಾನ್
ಸಲ್ಮಾನ್‌ ಖಾನ್    

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸೇರಿ‌ದಂತೆ ಆರು ಬಂಧಿತ ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು ಸೋಮವಾರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿರುವ ಮೂವರು ಆರೋಪಿಗಳ ವಿರುದ್ಧವೂ ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ.

‘ಅಪರಾಧ ವಿಭಾಗದ ವಿಶೇಷ ನ್ಯಾಯಾಲಯದಲ್ಲಿ 1,735 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ತನಿಖೆಯ ಭಾಗವಾಗಿ ಸಂಗ್ರಹಿಸಿದ ಪ್ರಮುಖ ದಾಖಲೆಗಳನ್ನು ಒಳಗೊಂಡಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ADVERTISEMENT

ಈ ಪ್ರಕರಣ ಸಂಬಂಧ 46 ಸಾಕ್ಷಿಗಳ ಹೇಳಿಕೆಗಳು ಮತ್ತು ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಸಾಕ್ಷಿಗಳ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಏಪ್ರಿಲ್‌ 14ರ ಮುಂಜಾನೆ 5 ಗಂಟೆ ವೇಳೆಗೆ ಎರಡು ಬೈಕ್‌ಗಳಲ್ಲಿ ಬಂದ ಇಬ್ಬರು ಆರೋಪಿಗಳು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.