ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಎದುರು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಸಲ್ಮಾನ್ ಅವರ ಹೇಳಿಕೆಯನ್ನು ಇಂದು (ಬುಧವಾರ) ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪರಾಧ ವಿಭಾಗದ ನಾಲ್ವರು ಅಧಿಕಾರಿಗಳು ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್ಮೆಂಟ್ಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಲ್ಮಾನ್ ಹಾಗೂ ಅವರ ಸಹೋದರ ಅರ್ಬಾಜ್ ಖಾನ್ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ
ಸುಮಾರು 4 ಗಂಟೆಗಳ ಕಾಲ ಸಲ್ಮಾನ್ ಖಾನ್ ಅವರ ಹೇಳಿಕೆಯನ್ನು ಹಾಗೂ 2 ಗಂಟೆಗಳ ಕಾಲ ಅರ್ಬಾಜ್ ಖಾನ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ.
ಈ ಘಟನೆಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡವಿದೆ ಎನ್ನಲಾಗಿದೆ. ಈವರೆಗೂ 6 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಒಬ್ಬ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.