ಮುಂಬೈ: ಬಾಲಿವುಡ್ ನಟ ಫರ್ಹಾನ್ ಅಖ್ತರ್ ಮತ್ತು ನಟಿ ಶಿಬಾನಿ ದಾಂಡೇಕರ್ ಅವರು ಇಂದು (ಶನಿವಾರ) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮದುವೆ ಸಮಾರಂಭದಲ್ಲಿ ಶಿಬಾನಿ ದಾಂಡೇಕರ್ ಅವರು ಕೆಂಪು ಬಣ್ಣದ ಗೌನ್ ಧರಿಸಿದರೆ, ಫರ್ಹಾನ್ ಕಪ್ಪು ಬಣ್ಣದ ಸೂಟು ಧರಿಸಿ ಮಿಂಚಿದ್ದಾರೆ.
ಇದೀಗ ಮದುವೆ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮದುವೆ ಸಮಾರಂಭವು ಖಾಸಗಿಯಾಗಿ ನೇರವೇರಿದ್ದು, ಕುಟುಂಬ ಸದಸ್ಯರು ಮತ್ತು ಆಪ್ತರನ್ನು ಮಾತ್ರ ಆಹ್ವಾನಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇಂದು ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಸ್ನೇಹಿತರು ಹಾಗೂ ಬಾಲಿವುಡ್‌ನ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.