ಮುಂಬೈ: ಬಾಲಿವುಡ್ ನಟಿ ರಾಧಿಕಾ ಅಪ್ಟೆ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಅವರ ಹಸಿಬಿಸಿ ಚಿತ್ರ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದ್ದು, ಆಕೆಯನ್ನು ಬಹಿಷ್ಕರಿಸುವಂತೆ ನೆಟ್ಟಿಗರು ಬೇಡಿಕೆ ಇರಿಸಿದ್ದಾರೆ.
ರಾಧಿಕಾ ಅಭಿನಯದ 'ಪರ್ಚೆಡ್' ಚಿತ್ರದಲ್ಲಿನನಗ್ನ ಚಿತ್ರ ವೈರಲ್ ಆಗಿದೆ. ಇದು ನೆಟ್ಟಿಗರ ಕೋಪಕ್ಕೆ ಕಾರಣವಾಗಿದ್ದು, ಭಾರತೀಯ ಸಂಸ್ಕೃತಿಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.
ಪರ್ಚೆಡ್ ಸಿನಿಮಾದಲ್ಲಿ ನಟಿ ರಾಧಿಕಾ ಅಪ್ಟೆ ಹಾಗೂ ನಟ ಅದಿಲ್ ಹುಸೇನ್ ನಡುವಣ 'ಬೋಲ್ಡ್ ಸೀನ್' ಹೆಚ್ಚು ವಿವಾದಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ತೆಳು ಉಡುಗೆಯಲ್ಲಿ ಬಿಸಿ ಏರಿಸಿದ ಕಂಗನಾ ರನೌತ್
ಆದರೆ ಈ ವಿವಾದಕ್ಕೆಸಂಬಂಧಿಸಿದಂತೆ ನಟಿ ರಾಧಿಕಾ ಅಪ್ಟೆ ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ. ಆದರೆ ಈ ಹಿಂದೆ ಬೋಲ್ಡ್ ಸಿನಿಮಾಗಳಲ್ಲಿ ನಟಿಸುವುದು ಹೆಚ್ಚು ಆರಾಮದಾಯಕ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.