ಮುಂಬೈ: ಬಾಲಿವುಡ್ ನಟ ಹೃತಿಕ್ ರೋಷನ್ ಅವರು ಯುವ ನಟಿ ಸಬಾ ಆಜಾದ್ ಜತೆಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರು ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ.
ಈ ಜೋಡಿ ಇತ್ತೀಚಿಗೆ ರೆಸ್ಟೋರೆಂಟ್‌ನಿಂದ ಒಟ್ಟಿಗೆ ಹೊರಬರುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ.
2000ರಲ್ಲಿ ಹೃತಿಕ್ ರೋಷನ್ ಹಾಗೂ ಸುಸಾನೆ ಖಾನ್ ಮದುವೆ ಆಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ನಂತರ ಈ ಜೋಡಿ 2014ರಲ್ಲಿ ವಿಚ್ಛೇದನ ಪಡೆದಿದ್ದರು. ಆ ಬಳಿಕ ಇಬ್ಬರೂ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗಿದ್ದರು. ಆದರೆ, ಇದೀಗ ಹೃತಿಕ್ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ವಿಚ್ಛೇದನ ಪಡೆದ ಬಳಿಕ ಸುಸಾನೆ ಖಾನ್ ಅವರೂ ಕೂಡ ಹಿಂದಿ ಕಿರುತೆರೆ ನಟ ಅರ್ಸ್ಲಾನ್ ಗೋನಿ ಅವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ವದಂತಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.
‘ತಮ್ಮ ವೈಯಕ್ತಿಕ ಜೀವನದ ವಿಚಾರಗಳನ್ನು ರಹಸ್ಯವಾಗಿ ಇಡಲು ಆದ್ಯತೆ ನೀಡುವ ಹೃತಿಕ್ ರೋಷನ್, ಸದ್ಯ ಸಬಾ ಆಜಾದ್ ಅವರ ಜತೆ ಸುತ್ತಾಡುತ್ತಿದ್ದಾರೆ. ಈ ಜೋಡಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ’ ಎಂದು ಹೃತಿಕ್ ಆಪ್ತ ಮೂಲಗಳು ತಿಳಿಸಿರುವುದಾಗಿ ‘ಬಾಲಿವುಡ್ ಹಂಗಾಮ’ ವರದಿ ಮಾಡಿದೆ.
‘ವಿಕ್ರಮ್ ವೇದ’ ಹಿಂದಿ ರಿಮೇಕ್ ಸಿನಿಮಾದಲ್ಲಿ ಹೃತಿಕ್ ಕಾಣಿಸಿಕೊಳ್ಳಲಿದ್ದಾರೆ. ರಾಕೇಶ್ ರೋಷನ್ ನಿರ್ದೇಶನದ ‘ಕ್ರಿಶ್-4’ ಸಿನಿಮಾದ ಮೂಲಕ ಮತ್ತೆ ಸೂಪರ್ ಹೀರೊ ಆಗಿ ಮಿಂಚಲು ಹೃತಿಕ್ ರೋಷನ್ ಸಜ್ಜಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.