ಆರ್. ಚಂದ್ರು ನಿರ್ದೇಶನದ ‘ಐ ಲವ್ ಯು’ ಚಿತ್ರಕ್ಕೆ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಯು/ಎ ಪ್ರಮಾಣ ಪತ್ರ ನೀಡಿದೆ.
ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಈ ಚಿತ್ರ ಬಿಡುಗಡೆಯಾಗಲಿದೆ. ‘ರಿಯಲ್ ಸ್ಟಾರ್’ ಉಪೇಂದ್ರ ಅವರಿಗೆ ರಚಿತಾ ರಾಮ್ ಮತ್ತು ಸೋನು ಗೌಡ ಸಾಥ್ ನೀಡಿದ್ದಾರೆ. ಸದ್ಯ ಉಪ್ಪಿ ಕುಟುಂಬ ಸಮೇತ ಅಮೆರಿಕ ಪ್ರವಾಸದಲ್ಲಿದ್ದಾರೆ.
ಮೇ ತಿಂಗಳಿನಲ್ಲಿಯೇ ಸಿನಿಮಾ ಬಿಡುಗಡೆಗೆ ಈ ಮೊದಲು ಚಿತ್ರತಂಡ ಯೋಚಿಸಿತ್ತು. ಆದರೆ, ಇದೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಹಾಗಾಗಿ, ಉಪ್ಪಿ ವಿದೇಶಪ್ರವಾಸದಿಂದ ಮರಳಿದ ಬಳಿಕ ಬಿಡುಗಡೆಯ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ. ಉಪ್ಪಿ ಜೂನ್‌ನಲ್ಲಿ ಜನರ ಮುಂದೆ ‘ಐ ಲವ್ ಯು’ ಹೇಳಲು ಬರುವ ನಿರೀಕ್ಷೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.