ADVERTISEMENT

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್‌ಗೆ ಮಧ್ಯಂತರ ಜಾಮೀನು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಸೆಪ್ಟೆಂಬರ್ 2022, 6:43 IST
Last Updated 26 ಸೆಪ್ಟೆಂಬರ್ 2022, 6:43 IST
ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗಕ್ಕೆ ವಿಚಾರಣೆಗಾಗಿ ಹಾಜರಾದ ಜಾಕ್ವೆಲಿನ್‌ ಫರ್ನಾಂಡಿಸ್‌
ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗಕ್ಕೆ ವಿಚಾರಣೆಗಾಗಿ ಹಾಜರಾದ ಜಾಕ್ವೆಲಿನ್‌ ಫರ್ನಾಂಡಿಸ್‌    

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ಸೋಮವಾರ ಜಾಮೀನು ಮಂಜೂರಾಗಿದೆ. ₹50,000 ರೂಪಾಯಿಗಳ ಬಾಂಡ್ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲಿಕ್ ಅವರು ಜಾಮೀನು ಅರ್ಜಿಯ ಬಗ್ಗೆ ಇಡಿಯಿಂದ ಪ್ರತಿಕ್ರಿಯೆ ಕೇಳಿದರು. ಇಡಿ ಪ್ರತಿಕ್ರಿಯೆ ನೀಡುವವರೆಗೆ ಜಾಮೀನು ಅರ್ಜಿ ನ್ಯಾಯಾಲಯದಲ್ಲಿ ಬಾಕಿ ಇರಲಿದೆ.

₹200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಸೋಮವಾರ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರಾಗಿದ್ದರು.

ADVERTISEMENT

ಇತ್ತೀಚೆಗೆ, ಜಾರಿ ನಿರ್ದೇಶನಾಲಯವು (ಇಡಿ) ಪ್ರಕರಣದಲ್ಲಿ ತನ್ನ ಎರಡನೇ ಪೂರಕ ಚಾರ್ಜ್ ಶೀಟ್ ಸಲ್ಲಿಸಿ ಜಾಕ್ವೆಲಿನ್‌ ಅವರನ್ನು ಆರೋಪಿ ಎಂದು ಹೆಸರಿಸಿತ್ತು.

ಕಳೆದ ಡಿಸೆಂಬರ್‌ನಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಇಡಿ ತನ್ನ ಮೊದಲ ಚಾರ್ಜ್ ಶೀಟ್ ಸಲ್ಲಿಸಿತ್ತು. ನಂತರ, ಫೆಬ್ರುವರಿಯಲ್ಲಿ ಚಂದ್ರಶೇಖರ್ ಅವರನ್ನು ಜಾಕ್ವೆಲಿನ್‌ ಫೆರ್ನಾಂಡಿಸ್‌ಗೆ ಪರಿಚಯಿಸಿದ್ದ ಪಿಂಕಿ ಇರಾನಿ ಎಂಬುವವರ ವಿರುದ್ಧವೂ ಪೂರಕ ಚಾರ್ಜ್‌ಶೀಟ್ ಸಲ್ಲಿಸಿತ್ತು.

ಇವುಗಳನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.