ADVERTISEMENT

ಜೇಮ್ಸ್ ಥಿಯೇಟರ್ ವಿವಾದ: ಸಿಎಂ ಭೇಟಿಯಾದ ನಟ ಶಿವರಾಜ್‌ಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಮಾರ್ಚ್ 2022, 13:25 IST
Last Updated 24 ಮಾರ್ಚ್ 2022, 13:25 IST
ಜೇಮ್ಸ್‌
ಜೇಮ್ಸ್‌    

ಬೆಂಗಳೂರು: ಪುನೀತ್ ರಾಜ್‌ಕುಮಾರ್ ಅಭಿನಯದ ಜೇಮ್ಸ್‌ ಸಿನಿಮಾವನ್ನು ಕೆಲ ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡುತ್ತಿರುವುದಕ್ಕೆ ನಟ ಶಿವರಾಜ್ ಕುಮಾರ್, ಪುನೀತ್ ಅಭಿಮಾನಿಗಳು ಹಾಗೂ ಕನ್ನಡ ಚಿತ್ರಪ್ರೇಮಿಗಳು ಕೆರಳಿದ್ದಾರೆ.

ಕಾಶ್ಮೀರ್ ಫೈಲ್ಸ್‌ ಸಿನಿಮಾ ತೋರಿಸಲು ಹಾಗೂ ನಾಳೆ ಬಿಡುಗಡೆಯಾಗಲಿರುವ ಆರ್‌ಆರ್‌ಆರ್ ಸಿನಿಮಾಕ್ಕೆ ಚಿತ್ರಮಂದಿರಗಳನ್ನು ಒದಗಿಸಲು ಜೇಮ್ಸ್‌ ಕನ್ನಡ ಸಿನಿಮಾವನ್ನು ಥಿಯೇಟರ್‌ಗಳಿಂದ ಎತ್ತಂಗಡಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ಈ ಕುರಿತು ನಟ ಶಿವರಾಜ್‌ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ADVERTISEMENT

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್‌ಕುಮಾರ್, ಜೇಮ್ಸ್‌ ಸಿನಿಮಾವನ್ನು ಕನ್ನಡ ಚಿತ್ರಪ್ರೇಮಿಗಳು ಮೆಚ್ಚಿಕೊಂಡಿದ್ದಾರೆ. ಯಾವ ಕಾರಣಕ್ಕೆ ಸಿನಿಮಾ ಥಿಯೇಟರ್‌ಗಳಿಂದ ಸಿನಿಮಾ ತಗೆಯುತ್ತಿದ್ದಾರೊ ಗೊತ್ತಿಲ್ಲ. ಕನ್ನಡ ಚಿತ್ರಗಳ ಪರವಾಗಿ ನಾವಿರುತ್ತೇವೆ ಎಂದರು.

ಸಮಸ್ಯೆ ಆಗಿರುವುದು ನಿಜ. ಸಿಎಂ ಬಳಿ ಈ ಬಗ್ಗೆ ಚರ್ಚಿಸಿದ್ದೇವೆ. ಅವರು ಸಮಸ್ಯೆ ಬಗೆಹರಿಸುವುದಾಗಿಭರವಸೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಗೀತಾ ಶಿವರಾಜ್‌ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.