ಹೈದರಾಬಾದ್: ಸಹೋದ್ಯೋಗಿ ಮಹಿಳೆ ಮೇಲೆ ಲೈಂಗಿಕ ದೌರ್ಜ್ಯನ್ಯ ಎಸಗಿದ ಆರೋಪದಲ್ಲಿ ಜೈಲು ಸೇರಿದ್ದ ತೆಲುಗು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿದೆ.
ಬಾಹುಬಲಿ, ಪುಷ್ಪಾ ಸೇರಿದಂತೆ ಹಲವು ಹಿಟ್ ಚಿತ್ರಗಳ ಹಾಡಿಗೆ ಹಾಗೂ ಕನ್ನಡದ ಅಪ್ಪು ಡ್ಯಾನ್ಸ್ ಹಾಡಿಗೆ ಜಾನಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದರು.
‘ಜಾನಿ ಮಾಸ್ಟರ್ ಅವರನ್ನು 2017ರಲ್ಲಿ ಭೇಟಿಯಾಗಿದ್ದೆ, 2 ವರ್ಷಗಳ ಬಳಿಕ ಅವರು ಸಹಾಯಕ ನೃತ್ಯ ಸಂಯೋಜಕಿಯಾಗಿ ನೇಮಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪೊಲೀಸರಿಗೆ ದೂರು ನೀಡಕೂಡದು ಎಂದು ದೈಹಿಕವಾಗಿಯೂ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಫೋಟೊಶೂಟ್ ಮತ್ತು ನೃತ್ಯ ತಾಲೀಮಿನ ಸಮಯದಲ್ಲಿ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ’ ಎಂದು ಮಹಿಳೆಯೊಬ್ಬರು ಜಾನಿ ಮಾಸ್ಟರ್ ವಿರುದ್ಧ ದೂರು ನೀಡಿದ್ದರು.
ಮಹಿಳೆಯ ದೂರಿನನ್ವಯ ಸೆ.19ರಂದು ಜಾನಿ ಅವರನ್ನು ಪೊಲೀಸರು ಬಂಧಿಸಿದ್ದರು.
ಕಳೆದ ತಿಂಗಳು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಜಾನಿ ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ನಿರಾಕರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.