ADVERTISEMENT

ಸೆ.6ಕ್ಕೆ ಕಂಗನಾ ಅಭಿನಯದ 'ಎಮರ್ಜೆನ್ಸಿ' ಚಿತ್ರ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಆಗಸ್ಟ್ 2024, 3:26 IST
Last Updated 23 ಆಗಸ್ಟ್ 2024, 3:26 IST
   

ಬೆಂಗಳೂರು: ನಟಿ, ಲೋಕಸಭಾ ಸಂಸದೆ ಕಂಗನಾ ರನೌತ್‌ ನಿರ್ದೇಶಿಸಿ ನಟಿಸಿರುವ ‘ಎಮರ್ಜೆನ್ಸಿ’ ಚಿತ್ರ ಸೆಪ್ಟೆಂಬರ್‌ 6ರಂದು ತೆರೆಗೆ ಬರುತ್ತಿದೆ. ಈ ಕುರಿತು ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಂಚಿಕೊಂಡಿ‌ದ್ದಾರೆ.

ಚಿತ್ರದಲ್ಲಿ ಕಂಗನಾ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅನುಪಮ್‌ ಖೇರ್‌, ಮಹಿಮಾ ಚೌಧರಿ, ಮಿಲಿಂದ್‌ ಸೋಮನ್‌, ಶ್ರೇಯಸ್‌ ತಲ್ಪಡೆ, ವಿಶಾಖ್‌ ನಾಯರ್‌ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದಾರೆ.

ಝೀ ಸ್ಟುಡಿಯೋಸ್‌ ಮತ್ತು ಮಣಿಕರ್ಣಿಕಾ ಫಿಲ್ಮ್ಸ್‌ನಡಿ ಚಿತ್ರ ನಿರ್ಮಾಣಗೊಂಡಿದೆ. ಸಂಚಿತ್ ಬಲ್ಹಾರಾ ಅವರ ಸಂಗೀತ, ರಿತೇಶ್ ಶಾ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.

ADVERTISEMENT

ಝೀ ಸ್ಟುಡಿಯೋಸ್‌ ಯುಟ್ಯೂಬ್‌ ಚಾನೆಲ್‌ನಲ್ಲಿ ಆಗಸ್ಟ್‌ ‌14ರಂದು ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ವೀಕ್ಷಣೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.