ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ಬಜೆಟ್‌ನಿಂದ ಕನ್ನಡ ಚಿತ್ರರಂಗಕ್ಕೆ ನಿರಾಸೆಯಾಗಿದೆ.
ಹೌದು, ಏಕೆಂದರೆ ಈ ಬಾರಿಯ ಬಜೆಟ್‌ನಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ಬೇಡಿಕೆಯಾದ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದಕ್ಕೆ ಯಾವುದೇ ಸ್ಪಂದನೆ ಸಿಕ್ಕಿಲ್ಲ.
ಕೊರೊನಾ ನಂತರ ಸಿನಿಮಾ ಮಂದಿರಗಳಿಗೆ ಹೋಗಿ ಸಿನಿಮಾ ನೋಡುವ ಹವ್ಯಾಸ ಜನರಲ್ಲಿ ಕಡಿಮೆಯಾಗಿರುವುದರಿಂದ ಎರಡು, ಮೂರನೇ ಹಂತದ ನಗರಗಳಲ್ಲಿ ಸಿನಿಮಾ ಮಂದಿರಗಳು ಹಾಳು ಬೀಳುತ್ತಿವೆ. ಹೀಗಾಗಿ ರಾಜ್ಯ ಸರ್ಕಾರವೇ ಮುಂದೆ ನಿಂತು ಈ ನಗರಗಳಲ್ಲಿ 100 ರಿಂದ 200 ಆಸನಗಳುಳ್ಳ ಮಿನಿ ಥಿಯೇಟರ್‌ಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ನಲ್ಲಿ ತಿಳಿಸಲಾಗಿದೆ.
ಇದನ್ನು ಬಿಟ್ಟರೇ 200 ಚಿತ್ರಗಳಿಗೆ ಈ ವರ್ಷದಲ್ಲಿ ಸಬ್ಸಿಡಿ ನೀಡುವ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಒಟ್ಟಾರೆ ಈ ಸಾರಿಯ ಬಜೆಟ್‌ನಲ್ಲಿ ಕನ್ನಡ ಚಿತ್ರರಂಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.