ಮುಂಬೈ: ನನ್ನ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣವಿದೆ ಎಂದು ನನಗೆ ತಿಳಿದಿಲ್ಲ. ನನ್ನ ತಾಯಿಯೇ ಎಲ್ಲವನ್ನೂ ನೋಡಿಕೊಳ್ಳುತ್ತಾರೆ ಎಂದು ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಖಾಸಗಿ ಟಿವಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ‘ನಾನೀಗ ಒಬ್ಬಂಟಿಯಾಗಿದ್ದೇನೆ. ಬಾಲಿವುಡ್‌ನಲ್ಲಿ ನಾನು ಮೋಸ್ಟ್ ಎಲಿಜಿಬಲ್ ಬ್ಯಾಚುಲರ್' ಎಂದು ಹೇಳಿದ್ದಾರೆ.
ಬ್ಯಾಂಕ್ ಬ್ಯಾಲೆನ್ಸ್ ಕುರಿತು ಕಾರ್ತಿಕ್ ಆರ್ಯನ್‌ರನ್ನು ಪ್ರಶ್ನಿಸಿದಾಗ, ‘ಈ ಬಗ್ಗೆ ನನಗೆ ಗೊತ್ತಿಲ್ಲ. ಇದು ನನ್ನ ತಾಯಿಗೆ ತಿಳಿದಿದೆ. ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ. ನನ್ನ ಹೊಸ ಲ್ಯಾಂಬರ್ಗಿನಿ ಕಾರಿನಲ್ಲಿ ಮೊದಲು ಕುಳಿತವರೂ ಸಹ ನನ್ನ ತಾಯಿಯೇ‘ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.