ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬಕ್ಕೆ ಇನ್ನೊಂದು ವಾರ ಬಾಕಿ ಇರುವಾಗಲೇ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಮನ್ ಡಿಪಿ ಹಂಚಿಕೊಳ್ಳಲು ಆರಂಭಿಸಿದ್ದಾರೆ. ಇದರ ನಡುವೆ ಸುದೀಪ್ ಅವರ ಹೊಸ ಹೇರ್‌ಸ್ಟೈಲ್ ಸಖತ್ ಸದ್ದು ಮಾಡುತ್ತಿದೆ.
ಹೌದು, ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ಸುದೀಪ್, ಸೆ.2ರಂದು ತಮ್ಮ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಇದೀಗ ಸುದೀಪ್ ಅವರು ಹೊಸ ಹೇರ್‌ಸ್ಟೈಲ್ ಮಾಡಿಸಿಕೊಂಡಿದ್ದು, ಫೋಟೊ, ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಸದ್ಯ ಸುದೀಪ್, ‘ಕೋಟಿಗೊಬ್ಬ 3’ ಹಾಗೂ ‘ವಿಕ್ರಾಂತ್ ರೋಣ’ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಕೊರೊನಾ ಕಾರಣದಿಂದ ಸಿನಿಮಾಗಳ ಬಿಡುಗಡೆ ದಿನಾಂಕವನ್ನು ಮುಂದೂಡಲ್ಪಟ್ಟಿದೆ.
ಇತ್ತೀಚೆಗೆ ಭಾರತದ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ತಮ್ಮ ಟ್ವಿಟರ್ ಖಾತೆಯಲ್ಲಿ ಸುದೀಪ್ ಅವರ ಕಾಮನ್ ಡಿಪಿ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿ ಶುಭ ಹಾರೈಸಿದ್ದರು.
ಶಿವರಾಜ್‌ಕುಮಾರ್ ಮತ್ತು ಸುದೀಪ್ ಒಟ್ಟಿಗೆ ನಟಿಸಿದ್ದ ‘ದಿ ವಿಲನ್’ ಚಿತ್ರದಲ್ಲೂ ಹೊಸ ಹೇರ್‌ಸ್ಟೈಲ್‌ನಲ್ಲಿ ಕಾಣಿಸಿಕೊಂಡಿದ್ದು, ಇವರ ಹೇರ್‌ಸ್ಟೈಲ್ ಸಖತ್ ಮೋಡಿ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.