ನಟ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೂರನೇ ಹಾಡು ಬಿಡುಗಡೆಯಾಗಿದೆ. ‘ದ್ವಾಪರ ದಾಟುತ’ ಎಂಬ ಹಾಡು ರಿಲೀಸ್ ಆಗಿದ್ದು, ಗಣೇಶ್ ಹಾಗೂ ಮಾಳವಿಕ ನಾಯರ್ ಹೆಜ್ಜೆ ಹಾಕಿದ್ದಾರೆ.
ಶ್ರೀನಿವಾಸರಾಜು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಆಗಸ್ಟ್ 15ರಂದು ತೆರೆಕಾಣುತ್ತಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದ್ದು, ಈ ಪೈಕಿ ಈಗಾಗಲೇ ‘ಮೈ ಮ್ಯಾರೇಜ್ ಇಸ್ ಫಿಕ್ಸ್ಡ್’ ಹಾಗೂ ‘ಚಿನ್ನಮ್ಮ’ ರಿಲೀಸ್ ಆಗಿವೆ. ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ‘ದ್ವಾಪರ ದಾಟುತ’ ಎಂಬ ಹಾಡನ್ನು ‘ಸರಿಗಮಪ’ ಖ್ಯಾತಿಯ ಜಸ್ಕರಣ್ ಸಿಂಗ್ ಹಾಡಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೇನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಿಸಿದ್ದಾರೆ. ‘ಕೃಷ್ಣಂ ಪ್ರಣಯ ಸಖಿ’ ಗಣೇಶ್ ಅವರ 41ನೇ ಸಿನಿಮಾವಾಗಿದ್ದು, ಗಣೇಶ್ಗೆ ಜೋಡಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.