ಮಂಗಳೂರು: ಎ.ಎಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶಿಕಾ ಸುವರ್ಣ ನಿರ್ಮಾಣ, ಎಂ.ಪಿ ಪ್ರಧಾನ್ ನಿರ್ದೇಶನದ ಬಹುನಿರೀಕ್ಷಿತ ‘ವಿಐಪೀಸ್ ಲಾಸ್ಟ್ ಬೆಂಚ್’ ತುಳು ಚಿತ್ರ ಶುಕ್ರವಾರ ತುಳುನಾಡಿನಲ್ಲಿ ಬಿಡುಗಡೆಗೊಂಡಿತು.
ನಗರದ ಬಿಗ್ ಸಿನೆಮಾಸ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಿದರು.‘ಲಾಸ್ಟ್ ಬೆಂಚ್’ ಸಿನಿಮಾ ತುಳುನಾಡು ಮಾತ್ರವಲ್ಲದೆ ಹೊರರಾಜ್ಯ, ದೇಶದ ಗಡಿಯನ್ನು ದಾಟಿ ಮುನ್ನುಗ್ಗಲಿ. ಸಿನಿಮಾ ಮಾಡುವುದು ಸುಲಭದ ಕೆಲಸವಲ್ಲ, ನಿರ್ಮಾಪಕರು ನಮ್ಮೆಲ್ಲರಿಗೂ ಮನರಂಜನೆ ನೀಡುವ ದೃಷ್ಟಿಯಿಂದ ಆ ಸಾಹಸಕ್ಕೆ ಇಳಿದಿದ್ದಾರೆ. ಅವರ ಕೈ ಬಲಪಡಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ’ ಎಂದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಕುಳಾಯಿ ಮಾಧವ ಭಂಡಾರಿ, ಕೆ.ಕೆ ಪೇಜಾವರ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಚಿತ್ರ ನಿರ್ಮಾಪಕಿ ಆಶಿಕಾ ಸುವರ್ಣ, ಸಹ ನಿರ್ಮಾಪಕ ಕಿರಣ್ ಶೆಟ್ಟಿ, ಭೋಜರಾಜ ವಾಮಂಜೂರು, ನಿರ್ದೇಶಕ ಪ್ರಧಾನ್ ಎಂ.ಪಿ., ನಟಿ ಆರಾಧ್ಯ ಶೆಟ್ಟಿ, ನವೀನ್ ಚಂದ್ರ ಪೂಜಾರಿ, ಕ್ಯಾಟ್ಕ ಅಧ್ಯಕ್ಷ ಮೋಹನ್ ಕೊಪ್ಪಲ, ನಟರಾದ ವಿನೀತ್ ಕುಮಾರ್, ಪೃಥ್ವಿ ಅಂಬರ್, ಐಸಿರಿ, ಚಿತ್ರ ಹಂಚಿಕೆದಾರ ಸಚಿನ್ ಎ ಎಸ್ ಉಪ್ಪಿನಂಗಡಿ, ಕಾರ್ಯಕಾರಿ ನಿರ್ಮಾಪಕ ಕಿಶೋರ್, ಕೀರ್ತನ್ ಭಂಡಾರಿ, ಸೃಜನ್ ಪೇಜಾವರ ಇದ್ದರು. ಮನೋಜ್ ಕಾರ್ಯಕ್ರಮ ನಿರೂಪಿಸಿದರು.
ಲಾಸ್ಟ್ ಬೆಂಚ್ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಪಿವಿಆರ್, ಸುರತ್ಕಲ್‌ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್, ಸುಳ್ಯದಲ್ಲಿ ಸಂತೋಷ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಅರುಣಾ ಮೊದಲಾದ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.