ಬೆಂಗಳೂರು: ಶ್ವಾಸಕೋಶದ ಕ್ಯಾನ್ಸರ್‌ನಿಂದ ನಿಧನರಾದ ಹೆಸರಾಂತ ನಿರೂಪಕಿ, ನಟಿ ಅಪರ್ಣಾ ಅವರ ಅಂತ್ಯಕ್ರಿಯೆ ಶುಕ್ರವಾರ ಬನಶಂಕರಿ ಚಿತಾಗಾರದಲ್ಲಿ ನಡೆಯಿತು.
ಅಪರ್ಣಾ ಅವರ ಪಾರ್ಥಿವ ಶರೀರವನ್ನು ಬನಶಂಕರಿಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಟರಾದ ಶ್ರೀನಾಥ್, ಸೃಜನ್ ಲೋಕೇಶ್ ಸೇರಿದಂತೆ ಚಿತ್ರರಂಗದ ಅನೇಕರು ಅಂತಿಮ ದರ್ಶನ ಪಡೆದರು. ಸರ್ಕಾರದ ಹಲವು ಕಾರ್ಯಕ್ರಮಗಳಿಗೆ ನಿರೂಪಕಿಯಾಗಿದ್ದ ಇವರಿಗೆ ಪೊಲೀಸ್ ಗೌರವ ನೀಡಲಾಯಿತು.
ಪತಿ ಹಾಗೂ ಸಾಹಿತಿ ನಾಗರಾಜ್ ವಸ್ತಾರೆ ಅವರು ಅಗಲಿದ ಪತ್ನಿ ಕುರಿತು ಭಾವುಕ ಕವನ ಬರೆದು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಸಾಕಷ್ಟು ಜನ ಶೇರ್ ಮಾಡಿ ಅರ್ಪಣಾ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.