ADVERTISEMENT

ಲಿಯೋ ಸಿನಿಮಾದ ನಿರ್ದೇಶಕ ಲೋಕೇಶ್‌ ಕನಕರಾಜ್‌ಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಅಕ್ಟೋಬರ್ 2023, 11:22 IST
Last Updated 24 ಅಕ್ಟೋಬರ್ 2023, 11:22 IST
<div class="paragraphs"><p>ಚಿತ್ರಕೃಪೆ:&nbsp;@Dir_Lokesh</p></div>

ಚಿತ್ರಕೃಪೆ: @Dir_Lokesh

   

ಬೆಂಗಳೂರು: ಇತ್ತೀಚಿಗೆ ತೆರೆ ಕಂಡಿರುವ ಲಿಯೋ ಚಿತ್ರದ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರು ಸಿನಿಮಾ ಪ್ರಚಾರದ ವೇಳೆ ಗಾಯಗೊಂಡಿದ್ದಾರೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಲಿಯೋ ಚಿತ್ರದ ಪ್ರಚಾರದ ವೇಳೆ ಲೋಕೇಶ್‌ ಅವರಿಗೆ ಸಣ್ಣಪುಟ್ಟ ಗಾಯಾಗಳಾಗಿವೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಲಿದ್ದಾರೆಂದು ಸುದ್ದಿಸಂಸ್ಥೆ ಪಿಟಿಐ ತಿಳಿಸಿದೆ.

ADVERTISEMENT

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಲೋಕೇಶ್‌, ‘ಸಿನಿಮಾ ಪ್ರಚಾರದ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದ್ದೇನೆ. ನಿಮ್ಮನ್ನು( ಅಭಿಮಾನಿ) ಭೇಟಿ ಮಾಡಿ ತುಂಬಾ ಖುಷಿಯಾಗಿದೆ. ಕೊಚ್ಚಿ ಹಾಗೂ ತ್ರಿಶೂರ್‌ನಲ್ಲೂ ಅಭಿಮಾನಿಗಳನ್ನು ಭೇಟಿ ಮಾಡಬೇಕಿತ್ತು. ಆದರೆ ಗಾಯಗೊಂಡಿರುವುದರಿಂದ ಸಾಧ್ಯವಾಗುತ್ತಿಲ್ಲ. ಶ್ರೀಘ್ರದಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ‘ ಎಂದು ಬರೆದುಕೊಂಡಿದ್ದಾರೆ.

‘ಮಾಸ್ಟರ್‌’ ಸಿನಿಮಾ ನಂತರ ಲೋಕೇಶ್‌ ಹಾಗೂ ನಟ ವಿಜಯ್‌ ಜೊತೆಯಾಗಿ ಕೈಗೆತ್ತಿಕೊಂಡ ಪ್ರಾಜೆಕ್ಟ್‌ ಇದಾಗಿದೆ. ಸೆವೆನ್‌ ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌ನಡಿ ಲಲಿತ್‌ ಕುಮಾರ್‌ ಈ ಸಿನಿಮಾ ನಿರ್ಮಿಸಿದ್ದಾರೆ. ಏಕಕಾಲಕ್ಕೆ ಐದು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್‌ ಆಗಿದೆ. ಚಿತ್ರಕ್ಕೆ ಅನಿರುದ್ಧ್‌ ರವಿಚಂದರ್‌ ಸಂಗೀತ ನಿರ್ದೇಶನವಿದೆ. ಬಾಲಿವುಡ್‌ ನಟ ಸಂಜಯ್‌ ದತ್‌ ಈ ಚಿತ್ರದ ಮೂಲಕ ಕಾಲಿವುಡ್‌ಗೆ ಹೆಜ್ಜೆ ಇಟ್ಟಿದ್ದಾರೆ. ತ್ರಿಷಾ, ಅರ್ಜುನ್‌ ಸರ್ಜಾ, ಪ್ರಿಯಾ ಆನಂದ್‌, ಮನ್ಸೂರ್‌ ಅಲಿ ಖಾನ್‌ ಸೇರಿದಂತೆ ನಟ– ನಟಿಯರು ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.