ಬೆಂಗಳೂರು: ಚಂದ್ರಾಲೇಔಟ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿ ನಟಿ ಅಭಿನಯ (52) ಸೇರಿದಂತೆ ಮೂವರ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ.
‘ನಟಿ ಅಭಿನಯ, ಜಯಮ್ಮ (74) ಹಾಗೂ ಚೆಲುವರಾಜು (54) ಅವರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೂವರಿಗೂ ಶಿಕ್ಷೆಯಾಗಿದ್ದು, ಮೂವರೂ ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ಆರೋಪಿಗಳ ಬಗ್ಗೆ ಯಾವುದಾದರೂ ಮಾಹಿತಿ ಇದ್ದರೆ ಮೊ. 9480801722(ಇನ್ಸ್ಪೆಕ್ಟರ್), 080–22942512 (ಚಂದ್ರಾಲೇಔಟ್ ಠಾಣೆ), 9901291829 (ಪಿಎಸ್ಐ) ಕರೆ ಮಾಡಿ ತಿಳಿಸಬಹುದು’ ಎಂದು ಕೋರಿದ್ದಾರೆ.
ಇದನ್ನೂ ಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.