ಮುಂಬೈ:ಬಾಲಿವುಡ್ ನಟಿ ಮಲೈಕಾ ಅರೋರಾ ಅವರಿದ್ದ ಕಾರು ಅಪಘಾತಕ್ಕೀಡಾಗಿದ್ದು ಅವರು ಗಾಯಗೊಂಡಿದ್ದಾರೆ.
ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಪರವಾಗಿ ರ‍್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅವರ ಕಾರು ಅಪಘಾತವಾಗಿದೆ.ನಟಿ ತಲೆಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುಣೆಯ ಪನ್ವೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮೂರ್ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮಲೈಕಾತಲೆಗೆ ಗಾಯವಾಗಿದ್ದು, ಹೆಚ್ಚಿನ ರಕ್ತಸ್ರಾವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮಲೈಕಾ ಅವರು ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದುಮಹಾರಾಷ್ಟ್ರ ನವನಿರ್ಮಾಣ ಸೇನೆಯ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.