ADVERTISEMENT

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ: ನಟ ಬೈಜು ಬಂಧನ, ಬಿಡುಗಡೆ

ಪಿಟಿಐ
Published 14 ಅಕ್ಟೋಬರ್ 2024, 9:26 IST
Last Updated 14 ಅಕ್ಟೋಬರ್ 2024, 9:26 IST
<div class="paragraphs"><p>ನಟ ಬೈಜು ಸಂತೋಷ್</p></div>

ನಟ ಬೈಜು ಸಂತೋಷ್

   

ಇನ್‌ಸ್ಟಾಗ್ರಾಮ್ /baijusanthoshh

ತಿರುವನಂತಪುರ: ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ, ಬೈಕ್‌ಗೆ ಡಿಕ್ಕಿ ಹೊಡೆದ ಆರೋಪದಡಿ ಮಲಯಾಳಂ ನಟ ಬೈಜು ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ನಗರದ ಮ್ಯೂಸಿಯಂ ಪೊಲೀಸ್ ಠಾಣೆ ವ್ಯಾಪ್ತಿಯ ಕೌಡಿಯಾರ್-ವೆಲ್ಲಯಂಬಲಂ ರಸ್ತೆಯಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಬೈಜು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಳಿಕ ಬೈಜು ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಬೈಕ್‌ ಪ್ರಯಾಣಿಕನು ಯಾವುದೇ ದೂರು ದಾಖಲಿಸಲಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.

ನಟ ಬೈಜು ಸಂತೋಷ್ ಅವರು ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಖಳನಾಯಕ ಪಾತ್ರ ಸೇರಿದಂತೆ ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.