ADVERTISEMENT

ಚಿತ್ರದ ಶೂಟಿಂಗ್ ವೇಳೆ ಅಪಘಾತ: ಮಲಯಾಳಂ ನಟರಾದ ಅರ್ಜುನ್, ಸಂಗೀತ್ ಪ್ರತಾಪ್‌ಗೆ ಗಾಯ

ಪಿಟಿಐ
Published 27 ಜುಲೈ 2024, 6:12 IST
Last Updated 27 ಜುಲೈ 2024, 6:12 IST
<div class="paragraphs"><p>ಮಲಯಾಳಂ ನಟರಾದ ಅರ್ಜುನ್ ಅಶೋಕನ್ ಮತ್ತು ಸಂಗೀತ್ ಪ್ರತಾಪ್</p></div>

ಮಲಯಾಳಂ ನಟರಾದ ಅರ್ಜುನ್ ಅಶೋಕನ್ ಮತ್ತು ಸಂಗೀತ್ ಪ್ರತಾಪ್

   

(ಇನ್‌ಸ್ಟಾಗ್ರಾಮ್ ಚಿತ್ರ)

ಕೊಚ್ಚಿ (ಕೇರಳ): ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಮಲಯಾಳಂ ನಟರಾದ ಅರ್ಜುನ್ ಅಶೋಕನ್ ಮತ್ತು ಸಂಗೀತ್ ಪ್ರತಾಪ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಬಂದರು ನಗರಿ ಕೊಚ್ಚಿಯ ಎಂಜಿ ರಸ್ತೆಯಲ್ಲಿ ಶನಿವಾರ ಮುಂಜಾನೆ 1.30ರ ವೇಳೆಗೆ ಈ ಘಟನೆ ನಡೆದಿದೆ.

'ಬ್ರೊಮ್ಯಾನ್ಸ್' ಎಂಬ ಚಿತ್ರದ ಚೇಸ್ ದೃಶ್ಯವನ್ನು ಚಿತ್ರೀಕರಿಸುವಾಗ, ನಟರು ಪ್ರಯಾಣಿಸುತ್ತಿದ್ದ ಕಾರು ಹೋಟೆಲ್ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಅವರು ಹೇಳಿದ್ದಾರೆ.

ಕಾರಿನಲ್ಲಿದ್ದ ಅಶೋಕನ್, ಪ್ರತಾಪ್ ಹಾಗೂ ರಸ್ತೆಯಲ್ಲಿ ನಿಂತಿದ್ದ ಫುಡ್ ಡೆಲಿವರಿ ಏಜೆಂಟ್ ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.