ತಿರುವನಂತಪುರ: ಮಲಯಾಳಂ ನಟಿ ಅಪರ್ಣಾ ನಾಯರ್ (33) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆಲವು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದ ಅಪರ್ಣಾ ತಿರುವನಂತಪುರದ ಕರಮನ ಪ್ರದೇಶದಲ್ಲಿ ಪತಿ ಮತ್ತು ಮಕ್ಕಳೊಂದಿಗೆ ವಾಸವಿದ್ದರು. ಗುರುವಾರ ರಾತ್ರಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಮಾಹಿತಿ ಪಡೆದು ಅಸಹಜ ಸಾವು ಎಂದು ಪ್ರಕರಣದ ದಾಖಲಿಸಲಾಗಿದೆ.
ಕುಟುಂಬದಲ್ಲಿನ ಕಲಹ ಸಾವಿಗೆ ಕಾರಣ ಎನ್ನುವುದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಪರ್ಣಾ ಅವರು ದೇವಸಪರಶಮ್, ಆತ್ಮಸಖಿ ಸೇರಿ ಹಲವು ಮಲಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದರು. ಜತೆಗೆ ಕಲ್ಕಿ, ಮೇಘತೀರ್ಥಂ, ಸೇರಿ ಹಲವು ಸಿನಿಮಾಗಳಲ್ಲೂ ನಟನೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.