ಮಣಿರತ್ನಂ ಆ್ಯಕ್ಷನ್ ಕಟ್ ಹೇಳಿರುವ ‘ಪೊನ್ನಿಯಿನ್ ಸೆಲ್ವನ್(ಪಿಎಸ್)’ ಸಿನಿಮಾದ ಎರಡನೇ ಭಾಗ ಏಪ್ರಿಲ್ 28ರಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಚಿತ್ರತಂಡ ಅದ್ಧೂರಿಯಾಗಿ ಪ್ರಚಾರ ಮಾಡಿದೆ.
ಉತ್ತರ ಭಾರತದಲ್ಲಿ ಪ್ರಚಾರ ಪೂರ್ಣಗೊಳಿಸಿರುವ ಚಿತ್ರತಂಡ ದಕ್ಷಿಣ ಭಾರತದ ಪ್ರಮುಖ ನಗರಗಳಲ್ಲಿ ಪ್ರಚಾರ ಆರಂಭಿಸಿದೆ. ನಟ ವಿಕ್ರಮ್, ನಟಿ ತ್ರಿಷಾ, ಕಾರ್ತಿ ಹಾಗೂ ಜಯಂರವಿ ಪ್ರಚಾರದಲ್ಲಿ ಭಾಗಿಯಾಗಿದ್ದರು. ‘ನನಗೆ ಎಲ್ಲಾ ರೀತಿಯ ಪಾತ್ರಗಳನ್ನು ಮಾಡಲು ಇಷ್ಟ. ಆದಿತ್ಯ ಕರಿಕಾಳನ್ ಪಾತ್ರ ನನಗೆ ತೃಪ್ತಿ ಕೊಟ್ಟಿದೆ. ಪಿಎಸ್–2 ಒಂದೊಳ್ಳೆ ಐತಿಹಾಸಿಕ ಸಿನಿಮಾ’ ಎಂದರು ವಿಕ್ರಮ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.