ADVERTISEMENT

ನಟಿ ಮೇಘನಾ ರಾಜ್ ಅವರೀಗ ‘ಫಾಗ್‌ ಹೀರೋ’

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 9:59 IST
Last Updated 2 ಆಗಸ್ಟ್ 2022, 9:59 IST
‘ಫಾಗ್’ ಪ್ರಶಸ್ತಿ ಸ್ವೀಕರಿಸಲು ಬಂದ ಆಹ್ವಾನ ಪ್ರದರ್ಶಿಸಿದ ಮೇಘನಾರಾಜ್‌ (ಬಲ)
‘ಫಾಗ್’ ಪ್ರಶಸ್ತಿ ಸ್ವೀಕರಿಸಲು ಬಂದ ಆಹ್ವಾನ ಪ್ರದರ್ಶಿಸಿದ ಮೇಘನಾರಾಜ್‌ (ಬಲ)   

ನಟಿ ಮೇಘನಾರಾಜ್ ಅವರಿಗೆ ಪ್ರತಿಷ್ಠಿತ ‘ಫಾಗ್‌ ಹೀರೋ’ (FOG HERO) ಪ್ರಶಸ್ತಿ ಲಭಿಸಿದೆ.

ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ‘ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾದರ್ನ್‌ ಕ್ಯಾಲಿಫೋರ್ನಿಯಾ’ ಇವರು ಆಯೋಜಿಸುವ ‘ಫೆಸ್ಟಿವಲ್ ಆಫ್ ಗ್ಲೋಬ್’(FOG)ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಈ ಸಮಾರಂಭ ಕಳೆದ 40 ವರ್ಷಗಳಿಂದ ಅದ್ದೂರಿಯಾಗಿ ನಡೆಯುತ್ತಿದೆ. ಈ ಬಾರಿ ಆಗಸ್ಟ್‌ 19, 20 ಹಾಗೂ 21ರಂದು ಈ ಸಮಾರಂಭ ನಡೆಯಲಿದೆ. ಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಯಾರಿಗೆ ‘ಫಾಗ್‌ ಹೀರೋ’?

ADVERTISEMENT

ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರಾದಕ್ರಿಸ್ ಮೂರ್ತಿ ಮಾಹಿತಿ ನೀಡಿದರು.

‘ಅಮಿತಾಭ್‌ ಬಚ್ಚನ್‌, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಆಗಸ್ಟ್ 21ರಂದು ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸಿಗುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ’ ಎಂದರು ನಟಿ ಮೇಘನಾರಾಜ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.