ಬೆಂಗಳೂರು: ನಟಿ ಮೇಘನಾ ರಾಜ್ ಇಂದು (ಮೇ 3) 32ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಭಿಮಾನಿಗಳು ಹಾಗೂ ಸಿನಿಮಾರಂಗದ ಗಣ್ಯರು ಜನ್ಮದಿನದ ಶುಭಾಶಯಗಳನ್ನು ಕೋರುತ್ತಿದ್ದಾರೆ.
ಪುತ್ರ ರಾಯನ್ ಜೊತೆಯಲ್ಲಿ ಮೇಘನಾ ರಾಜ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.ಪತಿ, ದಿವಂಗತ ನಟ ಚಿರಂಜೀವಿ ಸರ್ಜಾ ನಿಧನರಾಗಿ 2 ವರ್ಷಗಳ ಕಳೆದಿವೆ.2020ಜೂನ್ 7ರಂದು ಚಿರಂಜೀವಿ ಮೃತಪಟ್ಟಿದ್ದರು. ಚಿರು ಅಗಲಿಕೆ ನೋವಲ್ಲೇ 2 ವರ್ಷ ಕಳೆದಿರುವ ಮೇಘನಾ ಮತ್ತೆ ಸಿನಿಮಾರಂಗಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ ಎನ್ನಲಾಗಿದೆ.
ಚಿರು ಹಾಗೂ ಮೇಘನಾ ಪರಸ್ಪರ ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಮೇಘನಾಗಿಂತ ಚಿರು 6 ವರ್ಷ ದೊಡ್ಡವರು.
ಸೋಮವಾರ(ಮೇ 2)ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಅವರ 4ನೇ ವಿವಾಹ ವಾರ್ಷಿಕೋತ್ಸವ. ಈ ಸಂದರ್ಭದಲ್ಲಿ ಅವರು ಇನ್‌ಸ್ಟಾಗ್ರಾಂನಲ್ಲಿ ಚಿರು ಜೊತೆಗಿರುವ ಫೋಟೊವನ್ನು ಶೇರ್ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.