ಮುಂಬೈ: ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಸಮಾರಂಭಕ್ಕೆ ಆಮಂತ್ರಣವಿದ್ದರೂ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದುಬಾಲಿವುಡ್‌ನ ಖ್ಯಾತ ಗಾಯಕ ಮಿಕಾ ಸಿಂಗ್ ತಿಳಿಸಿದ್ದಾರೆ.
ಈ ಕುರಿತು ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ‘ಕತ್ರಿನಾ ಹಾಗೂ ವಿಕ್ಕಿ ಮದುವೆ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಲಾಗಿದೆ. ಆದರೆ, ಕೆಲಸದಲ್ಲಿ ಬ್ಯುಸಿ ಇರುವುದರಿಂದ ನನಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಈ ಕಾರ್ಯಕ್ರಮವನ್ನು ನಾನು ಮಿಸ್ ಮಾಡಿಕೊಳ್ಳುತ್ತಿದ್ದೇನೆ‘ ಎಂದು ತಿಳಿಸಿದ್ದಾರೆ.
ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ತಮ್ಮ ವಿವಾಹದ ಅತಿಥಿಗಳ ಪಟ್ಟಿಯನ್ನು 120ಕ್ಕೆ ಸೀಮಿತಗೊಳಿಸಿದ್ದಾರೆ ಎಂದು ವರದಿಯಾಗಿದೆ.ಡಿಸೆಂಬರ್ 7 ರಿಂದ 9ರವರೆಗೆರಾಜಸ್ಥಾನದಲ್ಲಿ ಕತ್ರಿನಾ–ವಿಕ್ಕಿ ವಿವಾಹ ಸಮಾರಂಭ ನಡೆಯತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.