ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಕ್ಯೂಟ್ ಜೋಡಿ ಎಂದೇ ಹೆಸರಾಗಿದ್ದ ನಟಿ ಮಿಲನ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ದಂಪತಿಗೆ ಹೆಣ್ಣು ಮಗು ಜನಿಸಿದೆ.
ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕೃಷ್ಣ, ‘ನಮಗೆ ಹೆಣ್ಣು ಮಗು ಜನಿಸಿದೆ. ತಾಯಿ ಮತ್ತು ಮಗು ಚೆನ್ನಾಗಿಯೇ ಇದ್ದಾರೆ. ತಾಯಿಯಾಗುವ ಪಯಣದಲ್ಲಿ ಮಿಲನಾ ಅವರು ಅನುಭವಿಸಿದ ನೋವು, ತ್ಯಾಗ, ಧೈರ್ಯದ ಬಗ್ಗೆ ಹೆಮ್ಮೆ ಇದೆ. ಈ ಅದ್ಭುತ ಪ್ರಯಾಣದಲ್ಲಿ ಸಾಗುವ ಎಲ್ಲಾ ತಾಯಂದಿರಿಗೆ ಒಂದು ದೊಡ್ಡ ನಮಸ್ಕಾರ.. ಮಹಿಳೆಯರ ಬಗ್ಗೆ ನನ್ನ ಗೌರವವು ದುಪ್ಪಟ್ಟಾಗಿದೆ. ನಾನು ಅದೃಷ್ಟವಂತನಾಗಿದ್ದೇನೆ, ಏಕೆಂದರೆ ನನಗೆ ಈಗ ಮಗಳಿದ್ದಾಳೆ’ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.
ಪರಸ್ಪರ ಪ್ರೀತಿಸಿದ್ದ ಈ ಜೋಡಿ 2021ರ ಫೆ.14ರಂದು ಪ್ರೇಮಿಗಳ ದಿನದಂದು ವಿವಾಹವಾಗಿದ್ದರು. ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ಮಾರ್ಚ್‌ನಲ್ಲಿ ವಿಶೇಷ ಫೋಟೊ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಬಹಿರಂಗಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.