ಬೆಂಗಳೂರು: ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ವೀಕ್ಷಣೆಗೆ ಟಿಕೆಟ್ ಖರೀದಿಸುವ ವ್ಯಕ್ತಿಗಳಿಂದ ಕಡ್ಡಾಯವಾಗಿ ಹೆಸರು ಮತ್ತು ಮೊಬೈಲ್ ಸಂಖ್ಯೆ ಸಂಗ್ರಹಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸಿನಿಮಾ ರಂಗದ ಪ್ರಮುಖರ ಬೇಡಿಕೆಯಂತೆ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಶೇ 100 ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲು ಬುಧವಾರ ಒಪ್ಪಿಗೆ ನೀಡಲಾಗಿತ್ತು. ಈ ಸಂಬಂಧ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿರುವ ಸರ್ಕಾರ, ಗ್ರಾಹಕರ ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದೆ.
ಪ್ರೇಕ್ಷಕರು ಎಲ್ಲ ಸಮಯದಲ್ಲೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರದರ್ಶನದ ನಡುವೆ ಎರಡು ವಿರಾಮ ನೀಡಬೇಕು. ಚಿತ್ರಮಂದಿರಗಳಲ್ಲಿ ಸರಿಯಾಗಿ ಗಾಳಿಯ ಚಲನೆಗೆ ಅವಕಾಶ ಕಲ್ಪಿಸಬೇಕು. ಹವಾನಿಯಂತ್ರಣ ವ್ಯವಸ್ಥೆ ಇರುವಲ್ಲಿ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕೋವಿಡ್ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚಿತ್ರಮಂದಿರದ ಪ್ರಮುಖ ಸ್ಥಳಗಳಲ್ಲಿ ಮಾಹಿತಿ ಪ್ರಕಟಿಸಬೇಕು ಎಂದೂ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.