ADVERTISEMENT

ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ: ನಟಿ ಕರೀನಾ ಕಪೂರ್‌ಗೆ ನೋಟಿಸ್‌

ಪಿಟಿಐ
Published 11 ಮೇ 2024, 11:25 IST
Last Updated 11 ಮೇ 2024, 11:25 IST
<div class="paragraphs"><p>ಕರೀನಾ ಕಪೂರ್</p></div>

ಕರೀನಾ ಕಪೂರ್

   

ಜಬಲ‍ಪುರ: ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದ ಸಂಬಂಧ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ ಕಪೂರ್‌ ಅವರಿಗೆ ನೋಟಿಸ್ ನೀಡಿದೆ.

ADVERTISEMENT

2021 ಆಗಸ್ಟ್‌ನಲ್ಲಿ ‘ಕರೀನಾ ಕಪೂರ್‌ ಪ್ರೆಗ್ನೆನ್ಸಿ ಬೈಬಲ್: ದಿ ಅಲ್ಟಿಮೇಟ್ ಮ್ಯಾನ್ಯುಯಲ್ ಫಾರ್ ಮಾಮ್ಸ್-ಟು-ಬಿ’ ಪುಸ್ತಕ ಬಿಡುಗಡೆಯಾಗಿದ್ದು, ಗರ್ಭಧಾರಣೆ ಸಂಬಂಧಿಸಿದ ಅನುಭವಗಳನ್ನು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದರು. ಪುಸ್ತಕದ ಶೀರ್ಷಿಕೆ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ವಕೀಲ ಕ್ರಿಸ್ಟೋಫರ್ ಆ್ಯಂಟನಿ, ಶೀರ್ಷಿಕೆಯಿಂದ ‘ಬೈಬಲ್‘ ಪದವನ್ನು ತೆಗೆದುಹಾಕುವಂತೆ ಮನವಿ ಮಾಡಿದ್ದರು. ಅಲ್ಲದೇ ಇದು ಕ್ರಿಶ್ಚಿಯನ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ತಿಳಿಸಿದ್ದರು.

ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಜಿ.ಎಸ್. ಅಹ್ಲುವಾಲಿಯಾ ಅವರಿದ್ದ ಏಕಸದಸ್ಯ ಪೀಠ ನೋಟಿಸ್ ಜಾರಿ ಮಾಡಿದೆ.

ಕರೀನಾ ಕಪೂರ್ ಜತೆಗೆ ಸಹಲೇಖಕಿ ಅದಿತಿ ಶಾ ಭೀಮ್‌ಜ್ಞಾನಿ, ಅಮೆಜಾನ್ ಆನ್‌ಲೈನ್ ಶಾಪಿಂಗ್, ಪುಸ್ತಕ ಪ್ರಕಾಶಕರು, ರಾಜ್ಯ ಸರ್ಕಾರ, ಜಬಲ್ಪುರದ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಒಮ್ಟಿ ಪೊಲೀಸ್ ಠಾಣೆಯ ಉಸ್ತುವಾರಿಗೂ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

‘ಕ್ರಿಶ್ಚಿಯನ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ನಟಿ ಮತ್ತು ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಒಮ್ಟಿ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ಪೊಲೀಸರು ತನಿಖಾ ವರದಿಯನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಕೆಳ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಕೆಳ ನ್ಯಾಯಾಲಯದ ಆದೇಶದ ವಿರುದ್ಧ ಫೆಬ್ರವರಿ 26, 2022ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೆವು’ ಎಂದು ಆ್ಯಂಟನಿ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.