ADVERTISEMENT

ಲಂಕಾದ ಮಾಜಿ ಕ್ರಿಕೆಟಿಗ ಮುರಳೀಧರನ್ ಬಯೋಪಿಕ್: '800' ಸಿನಿಮಾ ಅ. 6ರಂದು ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಸೆಪ್ಟೆಂಬರ್ 2023, 10:50 IST
Last Updated 14 ಸೆಪ್ಟೆಂಬರ್ 2023, 10:50 IST
<div class="paragraphs"><p>'800' ಸಿನಿಮಾ ಪೋಸ್ಟರ್‌</p></div>

'800' ಸಿನಿಮಾ ಪೋಸ್ಟರ್‌

   

ಬೆಂಗಳೂರು: ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರ ಜೀವನಾಧಾರಿತ ‘800’ ಸಿನಿಮಾ ಅಕ್ಟೋಬರ್‌ 6ರಂದು ವಿಶ್ವದ ಹಲವು ಭಾಗಗಳಲ್ಲಿ ಬಿಡುಗಡೆಯಾಗಲಿದೆ.

ಈ ಬಗ್ಗೆ ‘800’ ಚಿತ್ರತಂಡ ಮಾಹಿತಿ ನೀಡಿದೆ. 

ADVERTISEMENT

ಮುತ್ತಯ್ಯ ಮುರಳೀಧರನ್ ಶ್ರೀಲಂಕಾದ ಒಳ್ಳೆಯ ಸ್ಪಿನ್ ಬೌಲರ್‌ ಆಗಿದ್ದರು. ಅವರು ವೃತ್ತಿ ಜೀವನದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 800 ವಿಕೆಟ್ ಪಡೆದಿದ್ದಾರೆ. ಈ ಕಾರಣಕ್ಕೆ ಸಿನಿಮಾಗೆ ‘800‘ ಎಂದು ಹೆಸರಿಡಲಾಗಿದೆ. 

ಮುತ್ತಯ್ಯ ಮುರಳೀಧರನ್​ ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಕ್ರಿಕೆಟರ್ ಆಗಬೇಕು ಎನ್ನುವ ಕನಸು ಕಂಡಿದ್ದರು. ಎಲ್ಲ ಅಡೆತಡೆಗಳನ್ನು ದಾಟಿ ಅವರು ಬೆಳೆದರು. ಮುತ್ತಯ್ಯ ಮುರಳೀಧರನ್ ಕ್ರಿಕೆಟ್ ಬದುಕು ರೋಚಕ ಅಂಶಗಳಿಂದ ಕೂಡಿದೆ. ಸಾಕಷ್ಟು ವಿವಾದಗಳನ್ನು ಅವರು ಮೈಮೇಲೆ ಎಳೆದುಕೊಂಡಿದ್ದರು. ಪಾಕಿಸ್ತಾನದಲ್ಲಿ ಇವರಿದ್ದ ಬಸ್‌ ಮೇಲೆ ಗುಂಡಿನ ದಾಳಿ ನಡೆದಿತ್ತು ಈ ಎಲ್ಲಾ ಅಂಶಗಳು ಚಿತ್ರದಲ್ಲಿವೆ ಎಂದು ಚಿತ್ರತಂಡ ಹೇಳಿದೆ.  

ಮುಂಬೈನಲ್ಲಿ ಇತ್ತೀಚೆಗೆ ಸಚಿನ್​ ತೆಂಡೂಲ್ಕರ್ ಈ ಚಿತ್ರದ ಟ್ರೇಲರ್​ ಬಿಡುಗಡೆಗೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್‌ ಜಯಸೂರ್ಯ ಹಾಗೂ ಮುತ್ತಯ್ಯ ಮುರಳೀಧರನ್ ಹಾಜರಿದ್ದರು. 

800 ಸಿನಿಮಾವನ್ನು ಎಂ.ಎಸ್​. ಶ್ರೀಪತಿ ನಿರ್ದೇಶನ ಮಾಡಿದ್ದಾರೆ. ಬಾಲಿವುಡ್‌ ನಟ ಮಧುರ್​ ಮಿತ್ತಲ್​ಮುತ್ತಯ್ಯ ಮುರಳೀಧರನ್ ಪಾತ್ರದಲ್ಲಿ ನಟಿಸಿದ್ದಾರೆ.  ಅವರ ಪತ್ನಿಯ ಪಾತ್ರದಲ್ಲಿ ಮಹಿಮಾ ನಂಬಿಯಾರ್​ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗಿಬ್ರಾನ್‌ ಅವರ ಸಂಗೀತ ಇದೆ. ವಿವೇಕ್‌ ರಂಗಚಾರಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಸಿನಿಮಾವನ್ನು ತಮಿಳಿನಲ್ಲಿ ನಿರ್ಮಾಣ ಮಾಡಲಾಗಿದ್ದು ಹಿಂದಿ, ತೆಲುಗು, ಇಂಗ್ಲಿಷ್‌ಗೆ ಡಬ್‌ ಮಾಡಲಾಗಿದೆ. ಸಿನಿಮಾ ಅಕ್ಟೋಬರ್‌ 6ರಂದು ಬಿಡುಗಡೆಯಾಗಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.