ದಶಕದ ಹಿಂದೆ ತೆರೆಕಂಡಿದ್ದ ಯಶ್ ನಟನೆಯ ‘ರಾಜಾಹುಲಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ’ ಹೊಸ ದಾಖಲೆಯನ್ನೇ ಬರೆದಿತ್ತು. ಇದೀಗ ಹೊಸಬರ ‘ಮಿಸ್ಟರ್ ಆ್ಯಂಡ್ ಮಿಸಸ್ ರಾಜಾ ಹುಲಿರಾಜಾ ಹುಲಿ’ ಚಿತ್ರವೊಂದು ತೆರೆಗೆ ಬರಲು ಸಿದ್ಧವಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಇತ್ತೀಚೆಗಷ್ಟೇ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.
ಹೊನ್ನರಾಜ್ ಮೊದಲ ಸಲ ಆ್ಯಕ್ಷನ್ ಕಟ್ ಹೇಳಿ, ನಾಯಕನಾಗಿ ಕಾಣಿಸಿಕೊಂಡಿರುವ ಚಿತ್ರಕ್ಕೆ ಸಂಜಯ್ ಶ್ರೀನಿವಾಸ್ ಬಂಡವಾಳ ಹೂಡಿದ್ದಾರೆ. ‘ಚಿತ್ರದಲ್ಲಿ ನಾಯಕ ಯಶ್ ಅಭಿಮಾನಿಯಾಗಿರುತ್ತಾನೆ. ಅದಕ್ಕಾಗಿ ಈ ಶೀರ್ಷಿಕೆ ಇಡಲಾಗಿದೆ. ನೈಜ ಘಟನೆಯನ್ನು ಆಧರಿಸಿ ನಿರ್ಮಾಣವಾಗಿರುವ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ. ನಾಯಕ ಸ್ನೇಹಕ್ಕೆ ಹೆಚ್ಚು ಬೆಲೆ ಕೊಡುತ್ತ, ಸದಾ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುತ್ತಾನೆ.ಮದ್ದೂರು, ಹುಳಿಯಾರು, ಚಿಕ್ಕನಾಯಕನಾಹಳ್ಳಿ, ಶ್ರೀರಂಗಪಟ್ಟಣದ ಸುತ್ತಮುತ್ತ ಚಿತ್ರೀಕರಿಸಲಾಗಿದೆ’ ಎಂದರು ನಿರ್ದೇಶಕರು.
ಶೃತಿ ಬಬಿತ ಬಜಾರಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ವಿನು ಮನಸು ಅವರ ಸಂಗೀತ, ಶಿವಪುತ್ರ ಅವರ ಛಾಯಾಚಿತ್ರಗ್ರಹಣವಿದೆ. ಮೈಸೂರು ಮಂಜುಳ, ರೇಖಾದಾಸ್ ಮತ್ತಿತರರು ಈ ಚಿತ್ರದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.