ಬೆಂಗಳೂರು: ನಟ ಹಾಗೂ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಶುಕ್ರವಾರ 1.05 ಗಂಟೆ ವೇಳೆಗೆ ಗಂಡು ಮಗು ಜನಿಸಿದೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ.
ಮಗುವಿನ ಆಗಮನದಿಂದ ಎಚ್.ಡಿ. ಕುಮಾರಸ್ವಾಮಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ತಾತನಾದ ಖುಷಿಯಲ್ಲಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಮೊಮ್ಮಗನಿಗೆ ಆಶೀರ್ವದಿಸುವಂತೆ ಕೋರಿದ್ದಾರೆ.
2020ರ ಏಪ್ರಿಲ್ನಲ್ಲಿನಿಖಿಲ್ –ರೇವತಿವಿವಾಹ ನೆರವೇರಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.