‘ಅಂತಿಮವಾಗಿ ಲಿಂಗ ಸಮಾನತೆ ಹೋರಾಟಕ್ಕೆ ಗೆಲುವು ಸಿಕ್ಕಿದೆ!. ಮಾದಕ ವಸ್ತುಗಳ ವಿರುದ್ಧ ನಾನು ಸೇರಿ ಎಲ್ಲರೂ ಹೋರಾಟ ನಡೆಸಬೇಕು. ಆದರೆ ಭಾರತದಲ್ಲಿ ಡ್ರಗ್ಸ್ ಮಾರಾಟಗಾರರು ಅಥವಾ ಬಳಕೆದಾರರು ಕೇವಲ ಮೂವರು ಮಹಿಳೆಯರು ಮಾತ್ರವೇ? ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆಯಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲವೇ?’ ಎಂದು ನಟಿ ಪಾರೂಲ್ ಯಾದವ್ ವ್ಯಂಗ್ಯದ ದಾಟಿಯಲ್ಲಿ ಪ್ರಶ್ನಿಸಿದ್ದಾರೆ.
ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಈಗಾಗಲೇ ಡ್ರಗ್ಸ್ ಪೆಡ್ಲರ್‌ಗಳ ಜತೆಗೆ ನಂಟು ಹೊಂದಿರುವ ಆರೋಪದ ಮೇರೆಗೆ ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿನಟಿಯರ ಹೆಸರು ಮಾತ್ರ ಕೇಳಿ ಬಂದಿರುವುದಕ್ಕೆ ಪಾರೂಲ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.
‘ಯಾವುದೇ ಕಾರ್ಪೋರೇಟ್ ಸಿಬ್ಬಂದಿ, ವ್ಯಾಪಾರಸ್ಥರು, ಕ್ರೀಡಾಪಟುಗಳು ಅಥವಾ ನಟರು ಸಹ ಈ ಡ್ರಗ್ಸ್ ಧಂದೆಯಲ್ಲಿ ಭಾಗಿಯಾಗಿಲ್ಲವೇ? ನಾವು ಲಿಂಗ ಸಮಾನತೆಯ ಹೋರಾಟದಲ್ಲಿಗೆದ್ದಿದ್ದೇವೆ ಎಂದು ಸಂಭ್ರಮಿಸಬೇಕಾ? ಅಥವಾ ನಮ್ಮಲ್ಲಿ ಕೆಲವರನ್ನು ಮಾತ್ರ ಬೇಟೆಯಾಡುವುದು ಎಷ್ಟು ಸುಲಭ ಎಂದು ನಾವು ಅಳಬೇಕೇ?’ ಎಂದು ಪಾರುಲ್ ಯಾದವ್ ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.