ಒಡಿಶಾ: ಒಡಿಯಾ ಸಿನಿಮಾ ನಟ ರಾಯ್‌ಮೋಹನ್ ಪರಿದಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.
ರಾಯ್‌ಮೋಹನ್ ಅವರ ಈ ಸಾವು ಒಡಿಯಾ ಚಿತ್ರರಂಗ ಮತ್ತು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ ಎಂದು ಖ್ಯಾತ ನಟ ಹಾಗೂ ರಾಜಕಾರಣಿ ಸಿದ್ದಾಂತ ಮಹಾಪಾತ್ರ ಹೇಳಿದ್ದಾರೆ.
ಭುವನೇಶ್ವರದಲ್ಲಿರುವ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಉದಯ್‌ಪುರ ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಲ್ಲಿ ಕುಟುಂಬದೊಂದಿಗೆ ಅವರು ವಾಸಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದುಪೊಲೀಸರು ಖಚಿತಪಡಿಸಿದ್ದಾರೆ.
ಇದರ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೋಷಕ ಹಾಗೂ ಖಳನಾಯಕ ಪಾತ್ರಗಳಿಗೆ ರಾಯ್‌ಮೋಹನ್ ಹೆಸರಾಗಿದ್ದರು. 1963ರಲ್ಲಿ ಜನಿಸಿದ ರೈಮೋಹನ್ ಅವರು 40ಕ್ಕೂ ಹೆಚ್ಚು ಒಡಿಯಾ, 15 ಬೆಂಗಾಲಿ ಚಿತ್ರಗಳಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.