ಮುಂಬೈ: ಬೆತ್ತಲೆ ಫೋಟೊಶೂಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ ಪೊಲೀಸರ ಮುಂದೆ ನೀಡಿರುವ ಹೇಳಿಕೆ ಬಹಿರಂಗವಾಗಿದೆ.
‘ತಾವು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಪೋಟೊಗಳಲ್ಲಿ ಒಂದು ಫೋಟೊ ನನ್ನದಲ್ಲ‘ ಎಂದು ರಣವೀರ್ ಸಿಂಗ್ ಹೇಳಿದ್ದಾರೆ ಎಂದು ವರದಿಯಾಗಿದೆ.
ಕೆಲವು ದಿನಗಳ ಹಿಂದೆ ಇಲ್ಲಿನಚೆಂಬೂರು ಪೊಲೀಸ್ ಠಾಣೆಗೆ ಹಾಜರಾಗಿ ರಣವೀರ್ ಸಿಂಗ್ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಹಾಗೇಮುಂದೆ ಅಗತ್ಯವಿದ್ದಲ್ಲಿ ನಟ ಸಿಂಗ್‌ರನ್ನು ಮತ್ತೆ ಪೊಲೀಸ್ ಠಾಣೆಗೆ ಕರೆಯಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸರ್ಕಾರೇತರ ಸಂಸ್ಥೆಯೊಂದು ಚೆಂಬೂರು ಪೊಲೀಸ್ ಠಾಣೆಯಲ್ಲಿ ರಣವೀರ್ ಸಿಂಗ್ ಬೆತ್ತಲೆ ಫೋಟೊಶೂಟ್ ವಿರುದ್ಧ ದೂರು ದಾಖಲಿಸಿತ್ತು. ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.
ಜುಲೈ 22ರಂದುಬೆತ್ತಲೆ ಫೋಟೋಶೂಟ್ ಮಾಡಿಸಿದ್ದ ನಗ್ನ ಫೋಟೋಗಳನ್ನುರಣವೀರ್ ಸಿಂಗ್ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಚಿತ್ರಗಳು ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದ್ದವು. ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗಿತ್ತು.
ರಣವೀರ್ ಸದ್ಯ ‘ಸರ್ಕಸ್’ ಹಾಗೂ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಇವನ್ನೂ ಓದಿ
*ಉರ್ಫಿ ಜಾವೇದ್ ಫೋಟೊಶೂಟ್ಗೆ ರಣವೀರ್ ಸಿಂಗ್ ಸ್ಫೂರ್ತಿ!
*ಬೇರ್ ಗ್ರಿಲ್ಸ್ರನ್ನು ತಬ್ಬಿಕೊಂಡು ಮುತ್ತಿಟ್ಟ ನಟ ರಣವೀರ್ ಸಿಂಗ್!
*ಅಮೆರಿಕ ಪ್ರವಾಸದಲ್ಲಿ ದೀಪಿಕಾ ಪಡುಕೋಣೆ–ರಣವೀರ್ ಸಿಂಗ್: ಫೋಟೊ ವೈರಲ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.